ಹುಬ್ಬಳ್ಳಿ
‘ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ರಾಜ್ಯಪಾಲರು ತನಿಖೆಗೆ ಅನುಮತಿ ನೀಡುತ್ತಿದ್ದಂತೆ ಜಾತಿ ಲೇಪನ ಹಚ್ಚಿ ಬೀದಿಗಿಳಿದು ಹೋರಾಡುವುದು ಸರಿಯಲ್ಲ’ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಈ ವಿಷಯದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಅಹಿಂದ ವರ್ಗವರು ತಪ್ಪು ಮಾಡುತ್ತಿದ್ದಾರೆ, ಎಂದು ರವಿವಾರ ನಗರದಲ್ಲಿ ಮಾಧ್ಯಮಗಳಿಗೆ ಹೇಳಿದರು.
ಭ್ರಷ್ಟಾಚಾರಕ್ಕೆ ಯಾವುದೇ ಜಾತಿ ಇರುವುದಿಲ್ಲ. ಅದು ದೇಶಕ್ಕೆ ಅಂಟಿದ ಪಿಡುಗಾಗಿದೆ. ಇದರ ವಿರುದ್ಧ ಹೋರಾಟಕ್ಕಿಳಿದರೆ ಯಾರೂ ಜಾತಿಯ ನೆಪವನ್ನು ಮುಂದಿಡಬಾರದು ಎಂದು ಹೇಳಿದರು. ಅತ್ಯಂತ ಹಿಂದುಳಿದ, ಎಸ್ಸಿ ಸಮಾಜಕ್ಕೆ ಸೇರಿದ ರಾಜ್ಯಪಾಲರ ವಿರುದ್ಧ ಬೀದಿಗಿಳಿಯುವುದು ಕಾಂಗ್ರೆಸ್‌ಗೆ ಶೋಭೆ ತರುವುದಿಲ್ಲ, ಎಂದು ತಿಳಿಸಿದರು.
ಸಿ ಎಂ ಆರೋಪ ಮುಕ್ತರಾಗುವ ತನಕ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಬೇಕು ಎಂದು ಜೋಶಿ ಒತ್ತಾಯಿಸಿದರು.