ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ರವರ 7ನೇ ಹುತಾತ್ಮ ದಿನದ ಅಂಗವಾಗಿ ಗುರುವಾರ ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ಕಾರ್ಯಕ್ರಮ ನಡೆಯಿತು.
ಗೌರಿ ಅವರ ತಾಯಿ ಇಂದಿರಾ ಲಂಕೇಶ್, ಸಂಶೋಧಕಿ ಹಾಗೂ ಮಹಿಳಾ ಹೋರಾಟಗಾರ್ತಿ ಮೀನಾಕ್ಷಿ ಬಾಳಿ, ಕೆ.ಎಸ್ ವಿಮಲ, ದು ಸರಸ್ವತಿ, ಶಿವಸುಂಧರ್, ನೂರ್ ಶ್ರೀಧರ್, ಸಿರಿಮನೆ ನಾಗರಾಜ್, ದೀಪು, ಕೆ.ಎಲ್ ಅಶೋಕ್, ಸುನಿಲ್ ಸಿರಸಂಗಿ, ರಾಜಲಕ್ಷ್ಮಿ ಅಂಕಲಗಿ, ಡಾ.ಹೆಚ್.ವಿ ವಾಸು, ಮಲ್ಲಿಗೆ ಸಿರಿಮನೆ, ಪ್ರೊ ನಗರಿ ಬಾಬಯ್ಯ ಸೇರಿದಂತೆ ಹೋರಾಟಗಾರರು, ಸಾಮಾಜಿಕ ಕಾರ್ಯಕರ್ತರು, ಗೌರಿ ಲಂಕೇಶ್ ಅವರ ಒಡನಾಡಿಗಳು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಗೌರಿ ಲಂಕೇಶ್ ಅವರ ಸಮಾಧಿಗೆ ಪುಷ್ಪನಮನ ಅರ್ಪಿಸಿ, ಅವರ ಹೋರಾಟವನ್ನು ಮೆಲುಕು ಹಾಕಿದರು.
ಇಂದು ಸಂಜೆ ಗೌರಿ ಲಂಕೇಶ್ ಅವರ ನೆನಪಿನಲ್ಲಿ ‘ಗಂಡಾಂತರದಲ್ಲಿ ಭಾರತ ಗಣರಾಜ್ಯ‘ ಎಂಬ ಕಾರ್ಯಕ್ರಮ ಬೆಂಗಳೂರಿನ ಚಾಮರಾಜಪೇಟೆಯ ಚಲನಚಿತ್ರ ಕಲಾವಿದರ ಸಂಘದ ಡಾ.ಅಂಬರೀಷ್ ಸಭಾಂಗಣದಲ್ಲಿ ನಡೆಯಲಿದೆ. ಹಲವು ಗಣ್ಯರು ಭಾಗವಹಿಸಲಿದ್ದಾರೆ.