ವಿಜಯಪುರ
ಬಸವಾದಿ ಶರಣರಿಗೆ ಅವಹೇಳನ ಮಾಡಿರುವ ಶರಣರ ಶಕ್ತಿ ಚಲನಚಿತ್ರವನ್ನು ಮರು ಸೆನ್ಸಾರ್ ಪಡಿಸಲು ಆಗ್ರಹಿಸಿ ಹಲವಾರು ಬಸವಪರ ಸಂಘಟನೆಗಳು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನಗರದಲ್ಲಿ ಮನವಿ ಸಲ್ಲಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿದ ವಿವಿಧ ಬಸವಪರ ಸಂಘಟನೆಗಳ ಸುಮಾರು 80 ಜನ ಮುಖಂಡರು ಮತ್ತು ಕಾರ್ಯಕರ್ತರು ಚಲನಚಿತ್ರ, ನಿರ್ದೇಶಕರು, ನಿರ್ಮಾಪಕರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು.