ಗೌರಿ ಲಂಕೇಶ್ ಹಂತಕರಿಗೆ ಸನ್ಮಾನ ನಡೆದಿರುವ ವಿರುದ್ಧ ‘ಗೌರಿ ಬಳಗ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆ ವತಿಯಿಂದ ಮಂಗಳವಾರ ರಾಜ್ಯವ್ಯಾಪಿ ಪ್ರತಿಭಟನೆಗಳು ನಡೆದವು.
ರಾಯಚೂರು, ಶಿವಮೊಗ್ಗ, ಧಾರವಾಡ, ಅಂಕೋಲಾ, ಶೃಂಗೇರಿ, ಚಿಕ್ಕಮಂಗಳೂರು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಕ್ರೋಶ ವ್ಯಕ್ತಪಡಿಸಿ, ಗೃಹ ಸಚಿವರಿಗೆ ನಾಗರಿಕರ ಆಗ್ರಹ ಪತ್ರ ನೀಡಿ ಒತ್ತಾಯಿಸಲಾಯಿತು.
ಆರೋಪಿಗಳಿಗೆ ಸನ್ಮಾನ ಮಾಡುವುದು ಹತ್ಯೆಯನ್ನು ಪ್ರಚೋದಿಸುತ್ತದೆ. ಸಮಾಜಕ್ಕೆ ಕೆಟ್ಟ ಸಂದೇಶ ರವಾನಿಸುತ್ತದೆ. ಗೌರಿ ಹತ್ಯೆ ಆರೋಪಿಗಳಿಗೆ ನೀಡಲಾಗಿರುವ ಜಾಮೀನನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ