ನವದೆಹಲಿ
ವೀರರಾಣಿ ಕಿತ್ತೂರು ಚನ್ನಮ್ಮನವರ ಐತಿಹಾಸಿಕ 200ನೇ ವಿಜಯೋತ್ಸವದ ಅಂಗವಾಗಿ ನವದೆಹಲಿಯ ಸಂಸತ್ ಆವರಣದಲ್ಲಿರುವ ರಾಣಿ ಚನ್ನಮ್ಮ ಪ್ರತಿಮೆಗೆ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಲೋಕಸಭಾಧ್ಯಕ್ಷ ಓಂಬಿರ್ಲಾ, ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ, ಜಯಮೃತ್ಯುಂಜಯ ಸ್ವಾಮೀಜಿ, ವಚನಾನಂದ ಸ್ವಾಮೀಜಿ ಪುಷ್ಪನಮನ ಸಲ್ಲಿಸಿದರು.
ಸಚಿವ ವಿ. ಸೋಮಣ್ಣ ಮಾತನಾಡಿ, ಬ್ರಿಟಿಷರನ್ನು ಸೋಲಿಸಿದ ದಿನಕ್ಕೆ 200 ವರ್ಷಗಳಾಗಿದೆ. ಈ ದೇಶದ ಸ್ವತಂತ್ರ ಪೂರ್ವ ಇತಿಹಾಸದಲ್ಲಿ ಬ್ರಿಟಿಷರ ವಿರುದ್ಧ ಬಂಡಾಯ ಸಾರಿದ ಮೊದಲ ಧೀರ ಮಹಿಳೆ ಚೆನ್ನಮ್ಮ. ಅವರ ಇತಿಹಾಸವನ್ನು ದೇಶಕ್ಕೆ ಸಮರ್ಪಣೆ ಮಾಡುವ ಪ್ರಯತ್ನವೂ ಮಾಡಿದೆ ಎಂದು ಹೇಳಿದ್ದಾರೆ.

ಮೊದಲ ಬಾರಿಗೆ ಸಂಸತ್‌ನಲ್ಲಿ ಈ ಕಾರ್ಯಕ್ರಮ ನಡೆಯುತ್ತಿರುವುದು ಸಂತೋಷವಾಗಿದೆ ಎಂದು ಪುಷ್ಪಾರ್ಷನೆ ಬಳಿಕ ಮಾತನಾಡಿದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಈ ವರ್ಷ ಮಾಡಿದರೆ ಸಾಲದು ಪ್ರತಿ ವರ್ಷವೂ ಈ ಕಾರ್ಯಕ್ರಮ ಸಂಸತ್‌ನಲ್ಲಿ ನಡೆಯಬೇಕು. ಈ ಮೂಲಕ ಉತ್ತರ ಭಾರತದ ಜನರಿಗೆ ಝಾನ್ಸಿ ರಾಣಿ ಲಕ್ಷ್ಮೀಬಾಯಿ ರೀತಿಯಲ್ಲಿ ರಾಣಿ ಚೆನ್ನಮ್ಮ ಅವರ ಶೌರ್ಯ ತಿಳಿಯಬೇಕಿದೆ ಎಂದು ಓತ್ತಾಯಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯಸಭೆ ಸದಸ್ಯರಾದ ಈರಣ್ಣ ಕಡಾಡಿ, ಲೆಹರ್ ಸಿಂಗ್, ಶಾಸಕ ಅರವಿಂದ ಬೆಲ್ಲದ, ಬಸನಗೌಡ ಪಾಟೀಲ್ ಯತ್ನಾಳ್ ಸೇರಿ 200ಕ್ಕೂ ಹೆಚ್ಚು ದೆಹಲಿ ಕನ್ನಡಿಗರು ಪಾಲ್ಗೊಂಡಿದ್ದರು.