ಬೆಂಗಳೂರು
ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಸ್ಥಾನಕ್ಕೆ ಕರ್ನಾಟಕ ರಾಜ್ಯ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಶಂಕರ ಮಹಾದೇವ ಬಿದರಿ ಅವರು ನಾಮಪತ್ರ ಸಲ್ಲಿಸಿದರು. ಇವರೊಬ್ಬರೇ ನಾಮಪತ್ರ ಸಲ್ಲಿಸಿರುವುದರಿಂದ ಇವರದೇ ಅವಿರೋಧ ಆಯ್ಕೆ ಎನ್ನಲಾಗಿದೆ.
ನಾಮಪತ್ರ ಸಲ್ಲಿಕೆ ವೇಳೆ ಮಹಾಸಭಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಅರಣ್ಯ ಖಾತೆ ಸಚಿವ ಈಶ್ವರ್ ಖಂಡ್ರೆ, ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾದ ಎಚ್.ಎಂ. ರೇಣುಕಪ್ರಸನ್ನ, ರಾಜ್ಯ ಪ್ರಧಾನ ಕಾರ್ಯದರ್ಶಿ ನಟರಾಜ ಸಾಗರನಹಳ್ಳಿ, ತುಮಕೂರು ಜಿಲ್ಲಾಧ್ಯಕ್ಷ ಡಾ. ಪರಮೇಶ, ಮಂಡ್ಯ ಜಿಲ್ಲಾಧ್ಯಕ್ಷ ಎಸ್. ಆನಂದ, ಹಾವೇರಿ ಜಿಲ್ಲಾಧ್ಯಕ್ಷ ಕೋರಿಶೆಟ್ಟರ, ಚಿತ್ರದುರ್ಗ ಜಿಲ್ಲಾಧ್ಯಕ್ಷ ಶಿವಕುಮಾರ, ರಾಮನಗರ ಜಿಲ್ಲಾಧ್ಯಕ್ಷ ಯೋಗಾನಂದ, ಬಾಲಚಂದ್ರ, ಗೌರೀಶ ಆರಾಧ್ಯ ಹಾಗೂ ಮತ್ತೀತರರು ಇದ್ದರು.
ವೀರಶೈವ ಮಹಾಸಭಾದಿಂದ ಅಧಿಕೃತ ಮಾಹಿತಿ ಇನ್ನೂ ಲಭ್ಯವಾಗಿಲ್ಲ.