ಬೀದರ್
ಅಲೆಮಾರಿ ಜನಾಂಗಕ್ಕೆ ಮೂಲಸೌಕರ್ಯ ಒದಗಿಸಲು ವಿಶ್ವಕ್ರಾಂತಿ ದಿವ್ಯ ಪೀಠ ಬುಧವಾರ ಆಗ್ರಹಿಸಿತು.
ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಜಿಲ್ಲಾಧಿಕಾರಿಗಳ ಕಚೇರಿವರೆಗೆ ತೆರಳಿ ಮನವಿ ಸಲ್ಲಿಸಲಾಯಿತು.
ಹತ್ತಾರು ವರ್ಷಗಳಿಂದ ವಸತಿ ವಂಚಿತರಾಗಿ ಬದುಕು ಸಾಗಿಸುತ್ತಿರುವ ಅಲೆಮಾರಿ ಸಮುದಾಯಕ್ಕೆ ನಿವೇಶನ ಮಂಜೂರು ಮಾಡಿ ಮೂಲಭೂತ ಸೌಕರ್ಯ ಕಲ್ಪಿಸಬೇಕೆಂಬ ಉದ್ದೇಶದಿಂದ ಹೋರಾಟ ರೂಪಿಸಲಾಗಿತ್ತು ಎಂದು ಸಂಘಟನೆಯ ಅಧ್ಯಕ್ಷ ಓಂಪ್ರಕಾಶ್ ರೊಟ್ಟೆ ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವರ ಕಛೇರಿ ಮುಂಭಾಗದಲ್ಲಿ ಗಾಂಧೀಜಿ ಜಯಂತಿ ಆಚರಿಸಲಾಯಿತು.