ಬಸವನ ಬಾಗೇವಾಡಿ:
ಪಟ್ಟಣದ ಶ್ರೀ ಬಸವೇಶ್ವರ ವೃತ್ತದಲ್ಲಿ ಬುಧವಾರ ರಾಷ್ಟ್ರೀಯ ಬಸವ ಸೈನ್ಯ ಸಂಘಟನೆಯ ವತಿಯಿಂದ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿ ಹಾಗೂ ಸಿದ್ಧಗಂಗಾ ಮಠದ ತ್ರಿವಿಧ ದಾಸೋಹಿ, ಲಿಂಗೈಕ್ಯ ಪರಮಪೂಜ್ಯ ಡಾ. ಶಿವಕುಮಾರ ಮಹಾಸ್ವಾಮಿಗಳವರ ಪುಣ್ಯಸ್ಮರಣೆಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಬಸವ ಸೈನ್ಯದ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಶಂಕರಗೌಡ ಎಸ್. ಬಿರಾದಾರ ಅವರು ಮಹಾಪುರುಷರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿ, ‘ನೇರ, ನಿಷ್ಠುರವಾಗಿ ವಚನಗಳನ್ನು ಬರೆದ ಅಂಬಿಗರ ಚೌಡಯ್ಯನವರು ಸಮಸಮಾಜ ನಿರ್ಮಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು.
ದೋಣಿ ನಡೆಸುವ ಅಂಬಿಗನಾಗಿ ಕಾಯಕ ಮಾಡುತ್ತಾ, ನೂರಾರು ವಚನಗಳನ್ನು ಬರೆಯುವ ಮೂಲಕ ವಚನ ಸಾಹಿತ್ಯಕ್ಕೆ ಪ್ರಮುಖ ಕೊಡುಗೆ ನೀಡಿದ್ದಾರೆ’ಎಂದರು. ಹಾಗೂ ಸಿದ್ಧಗಂಗಾ ಮಠದ ತ್ರಿವಿಧ ದಾಸೋಹಿಗಳಾದ ಡಾ. ಶಿವಕುಮಾರ ಸ್ವಾಮೀಜಿ ಅವರು ಭೌತಿಕವಾಗಿ ನಮ್ಮೊಂದಿಗೆ ಇಲ್ಲದೇ ಇದ್ದರೂ ಮಾನಸಿಕವಾಗಿ ನಮ್ಮೊಂದಿಗೆ ಇದ್ದಾರೆ.

12ನೇ ಶತಮಾನದಲ್ಲಿ ಬಸವಣ್ಣ ಎಲ್ಲ ಧರ್ಮದವರಿಗೆ ಇಷ್ಟಲಿಂಗವನ್ನು ಕೊಟ್ಟರು. ಶಿವಕುಮಾರ ಸ್ವಾಮೀಜಿ ಅದನ್ನು ಜಗತ್ತಿಗೆ ಪ್ರಚುರಪಡಿಸಿದರು. ‘ಇಷ್ಟಲಿಂಗ ಪೂಜೆಯನ್ನು ಇಷ್ಟಪಟ್ಟು ಮಾಡುತ್ತಲೇ ತಮ್ಮ ಶಕ್ತಿ ಪಡೆದುಕೊಳ್ಳುತ್ತಿದ್ದರು’ಅಕ್ಷರ ದಾಸೋಹ ಪರಂಪರೆಯನ್ನು ಸಮರ್ಥವಾಗಿ ಮುನ್ನಡೆಸಿದರು ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿಗಳಾದ ಲ.ರು. ಗೊಳಸಂಗಿ ಹಾಗೂ ಶ್ರೀಕಾಂತ ಕೊಟ್ರಶೆಟ್ಟಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಸವ ಸೈನ್ಯದ ತಾಲೂಕಾ ಅಧ್ಯಕ್ಷರಾದ ಸಂಜು ಬಿರಾದಾರ, ಮುಖಂಡರಾದ ಮನ್ನಾನ ಶಾಬಾದಿ, ಜಟ್ಟಿಂಗರಾಯ ಮಾಲಗಾರ, ನಿವೃತ್ತ ಮುಖ್ಯೋಪಾಧ್ಯಾಯರಾದ ಎಸ್. ಎಂ. ಸಿಂದಗಿ, ಲಕ್ಷ್ಮಣ ಅಂಬಿಗೇರ, ಬದ್ರು ಮಣ್ಣೂರ, ಹಣಮಂತ ಕಾಮನಕೇರಿ, ಸಂಗಮೇಶ ಜಾಲಗೇರಿ, ಪ್ರವೀಣ ಪೂಜಾರಿ, ರಾಜು ಮುಳವಾಡ, ಸಿದ್ದಲಿಂಗ ಓಡಿಯರ, ಶ್ರೀಶೈಲ ಹಿರೇಮಠ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಬಸವನಬಾಗೇವಾಡಿ ತಾಲೂಕಿನ ಯಂಭತ್ನಾಳ ಗ್ರಾಮದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿಯನ್ನು ಆಚರಣೆ ಮಾಡಲಾಯಿತು.

ಶಿವಯ್ಯ ಹಿರೇಮಠ, ಗುರುಮೂರ್ತಿ ಹಿರೇಮಠ್ ಶ್ರೀ ಅಂಬಿಗರ ಚೌಡಯ್ಯನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಹಾಗೂತಾಲೂಕ ಅಧ್ಯಕ್ಷರಾದ ಶಿವಾನಂದ ಮಂಗನವರ ಅಂಬಿಗರ ಚೌಡಯ್ಯನವರ ಜೀವನ ಚರಿತ್ರೆ ಕುರಿತು ಮಾತನಾಡಿದರು.
ಶರಣು ಮಾತಾಳಿ, ಶಂಕ್ರಪ್ಪ ರೂಡಗಿ, ಅಡಿವೇಪ್ಪ ಮಂಗಾನವರ, ಅಶೋಕ ಹಂಡಿ, ಪರಮಾನಂದ ಬಳಗಾನೂರು ಮತ್ತಿತರರು ಪಾಲ್ಗೊಂಡಿದ್ದರು.
