ಬಸವಕಲ್ಯಾಣ:
ಬಸವಕಲ್ಯಾಣದಲ್ಲಿ ನಡೆಯುವ ೪೬ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವ-೨೦೨೫ದಲ್ಲಿ ಅನುಭವ ಮಂಟಪದಿಂದ ಕೊಡಮಾಡುವ ೨೦೨೫ನೇ ಸಾಲಿನ ಪ್ರಶಸ್ತಿಗಳನ್ನು ಪೂಜ್ಯ ಡಾ. ಬಸವಲಿಂಗ ಪಟ್ಟದ್ದೇವರು ಘೋಷಿಸಿದ್ದಾರೆ.
ಬೀದರಿನ ಚಿತ್ರಕಲಾವಿದ ಸಿ.ಬಿ. ಸೋಮಶೆಟ್ಟಿ ಅವರ ಸಾಧನೆ ಗುರುತಿಸಿ, ‘ಪೂಜ್ಯ ಶ್ರೀ ಡಾ. ಚನ್ನಬಸವ ಪಟ್ಟದ್ದೇವರು ಅನುಭವ ಮಂಟಪ ಪ್ರಶಸ್ತಿ’ ನೀಡಿ ಗೌರವಿಸಲಾಗುತ್ತಿದೆ. ಈ ಪ್ರಶಸ್ತಿಯು ಒಂದು ಲಕ್ಷ ರೂಪಾಯಿ ಹಾಗೂ ಪ್ರಶಸ್ತಿ ಫಲಕ ಹೊಂದಿದೆ.
ಹೊಸಪೇಟೆಯ ಖ್ಯಾತ ಚಿಂತಕ ಡಾ. ಕೆ. ರವೀಂದ್ರನಾಥ ಸಾಧನೆ ಗುರುತಿಸಿ, ‘ಡಾ.ಎಂ.ಎಂ. ಕಲಬುರಗಿ ಸಾಹಿತ್ಯ ಸಂಶೋಧನಾ ರಾಷ್ಟ್ರೀಯ ಪ್ರಶಸ್ತಿ’ ನೀಡಿ ಗೌರವಿಸಲಾಗುತ್ತಿದೆ. ಈ ಪ್ರಶಸ್ತಿಯು ಐವತ್ತು ಸಾವಿರ ರೂಪಾಯಿ ಹಾಗೂ ಪ್ರಶಸ್ತಿ ಫಲಕ ಹೊಂದಿದೆ.
ಶಿರೂರುನ ನಾಟಕಕಾರ ಬಸವರಾಜ ಬೆಂಗೇರಿ ಅವರ ಸೇವೆ ಗುರುತಿಸಿ, ‘ಬಸವಭಾಸ್ಕರ್ ರಾಷ್ಟ್ರೀಯ ಪ್ರಶಸ್ತಿ’ ನೀಡಿ ಗೌರವಿಸಲಾಗುತ್ತಿದೆ. ಈ ಪ್ರಶಸ್ತಿಯು ಒಂದು ಲಕ್ಷ ರೂಪಾಯಿ ಹಾಗೂ ಪ್ರಶಸ್ತಿ ಫಲಕ ಹೊಂದಿದೆ.
ಬೆಂಗಳೂರಿನ ಸುಮಂಗಲಿ ಸೇವಾ ಆಶ್ರಮದ ಅಧ್ಯಕ್ಷರಾದ ಡಾ. ಎಸ್.ಜಿ. ಸುಶೀಲಮ್ಮ, ಅವರ ಸಮಗ್ರ ಸೇವೆ ಗುರುತಿಸಿ, ‘ಅನುಭವಮಂಟಪ ರಾಷ್ಟ್ರೀಯ ಪ್ರಶಸ್ತಿ’ ನೀಡಿ ಗೌರವಿಸಲಾಗುತ್ತಿದೆ. ಈ ಪ್ರಶಸ್ತಿಯು ಒಂದು ಲಕ್ಷ ರೂಪಾಯಿ ಹಾಗೂ ಪ್ರಶಸ್ತಿ ಫಲಕ ಹೊಂದಿದೆ.
ಸುಪ್ರಸಿದ್ಧ ಆರ್ಯುವೇದ ವೈದ್ಯ ಡಾ. ಮಲ್ಲಿಕಾರ್ಜುನ ರಗಟೆ ಅವರ ಸೇವೆ ಗುರುತಿಸಿ, ‘ಶರಣ ವೈದ್ಯ ಸಂಗಣ್ಣ ಪ್ರಶಸ್ತಿ’ ನೀಡಿ ಗೌರವಿಸಲಾಗುತ್ತಿದೆ. ಈ ಪ್ರಶಸ್ತಿಯು ರೂ. ಹತ್ತು ಸಾವಿರ ಹಾಗೂ ಪ್ರಶಸ್ತಿ ಫಲಕ ಹೊಂದಿದೆ.
ಖಾನಾಪೂರದ ಸಾವಯವ ಕೃಷಿಕ ರಮೇಶ ಮೋರ್ಗೆ ಅವರ ಕೃಷಿ ಸೇವೆಯನ್ನು ಗುರುತಿಸಿ ‘ಶರಣ ಒಕ್ಕಲಿಗ ಮುದ್ದಣ್ಣ ಪ್ರಶಸ್ತಿ-೨೦೨೪’ ನೀಡಿ ಗೌರವಿಸಲಾಗುತ್ತಿದೆ. ಈ ಪ್ರಶಸ್ತಿಯು ರೂ. ಹತ್ತು ಸಾವಿರ ಹಾಗೂ ಪ್ರಶಸ್ತಿ ಫಲಕ ಹೊಂದಿರುತ್ತದೆ.
ಹುಡಗಿಯ ಸಾವಯವ ಕೃಷಿಕ ಸೋಮಶಂಕರ ಅವರ ಕೃಷಿ ಸೇವೆ ಗುರುತಿಸಿ ‘ಶರಣ ಒಕ್ಕಲಿಗ ಮುದ್ದಣ್ಣ ಪ್ರಶಸ್ತಿ-೨೦೨೫’ ನೀಡಿ ಗೌರವಿಸಲಾಗುತ್ತಿದೆ. ಈ ಪ್ರಶಸ್ತಿಯು ರೂ. ಹತ್ತು ಸಾವಿರ ಹಾಗೂ ಪ್ರಶಸ್ತಿ ಫಲಕ ಹೊಂದಿದೆ.
ಎಲ್ಲ ಪ್ರಶಸ್ತಿಗಳು ಅನುಭವ ಮಂಟಪ ಉತ್ಸವದಲ್ಲಿ ಪೂಜ್ಯರ ಹಾಗೂ ಗಣ್ಯರ ಸಮ್ಮುಖದಲ್ಲಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
