ಚಿತ್ರದುರ್ಗ
ವಿಶ್ವಗುರು ಬಸವಣ್ಣನವರ ಬದುಕು, ಸಂದೇಶ ಮತ್ತು ಚಿಂತನೆ ಪ್ರಚುರಪಡಿಸುವ ನಿಟ್ಟಿನಲ್ಲಿ ರಾಜ್ಯದಾದ್ಯಂತ ಹಮ್ಮಿಕೊಂಡಿರುವ ಅನುಭವ ಮಂಟಪ-ಬಸವಾದಿ ಶರಣರ ವೈಭವ ರಥಯಾತ್ರೆಯನ್ನು ಭಾನುವಾರ ಸ್ವಾಗತಿಸಲಾಯಿತು.
ನಗರದ ಒನಕೆ ಓಬವ್ವ ವೃತ್ತದಲ್ಲಿ ರಥಯಾತ್ರೆಯನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಸ್ವಾಗತಿಸಿದರು.
ಏಪ್ರಿಲ್ 29, 30ರಂದು ಕೂಡಲಸಂಗಮದಲ್ಲಿ ಆಯೋಜಿಸಿರುವ ಅನುಭವ ಮಂಟಪ-ಬಸವಾದಿ ಶರಣ ವೈಭವ ಕಾರ್ಯಕ್ರಮದ ಅಂಗವಾಗಿ ರಥಯಾತ್ರೆ ನಡೆಯುತ್ತಿದೆ. ತುಮಕೂರಿನಿಂದ ಚಿತ್ರದುರ್ಗ ಜಿಲ್ಲೆಗೆ ಬಂದ ರಥಯಾತ್ರೆ, ಬಳಿಕ ದಾವಣಗೆರೆಗೆ ತೆರಳಿತು.
ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಷಿ, ತಹಶೀಲ್ದಾರ್ ಗೋವಿಂದರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಎಂ. ಗುರುನಾಥ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಂ. ಶಿವಸ್ವಾಮಿ, ಮುಖಂಡರಾದ ಮಹಡಿ ಶಿವಮೂರ್ತಿ, ರೀನಾ ವೀರಭದ್ರಪ್ಪ, ಕೆಇಬಿ ಷಣ್ಮುಖಪ್ಪ, ಕೆ.ಸಿ.ನಾಗರಾಜು, ಶಶಿಧರ್ ಇದ್ದರು.