‘ಅನುಭವ ಮಂಟಪ ಸಂಸ್ಕೃತಿ ವಿದ್ಯಾಲಯ’ ಪ್ರವೇಶ ಪರೀಕ್ಷೆಗೆ ಆಹ್ವಾನ

ಬಸವ ಮೀಡಿಯಾ
ಬಸವ ಮೀಡಿಯಾ

ಬೀದರ

ನಗರದ “ಅನುಭವ ಮಂಟಪ ಸಂಸ್ಕೃತಿ ವಿದ್ಯಾಲಯ”ದ ಕನ್ನಡ ಮಾಧ್ಯಮ 6ನೇ ತರಗತಿಯ ಹೆಣ್ಣುಮಕ್ಕಳಿಗಾಗಿ, ಊಟ ವಸತಿ ಹಾಗೂ ಶಿಕ್ಷಣವನ್ನು ಸಂಪೂರ್ಣ ಉಚಿತವಾಗಿ ನೀಡಲಾಗುತ್ತದೆ. ವಿದ್ಯಾಲಯದ ಪ್ರವೇಶಕ್ಕಾಗಿ ಎಪ್ರಿಲ್ 6, 2025 ರವಿವಾರದಂದು ಬೆಳಿಗ್ಗೆ 10 ಗಂಟೆಗೆ ಡಾ. ಚನ್ನಬಸವ ಪಟ್ಟದೇವರ ಪ್ರಸಾದ ನಿಲಯ ವಿದ್ಯಾನಗರ, ಬೀದರ ಇಲ್ಲಿ ಪರೀಕ್ಷೆ ನಡೆಸಲಾಗುತ್ತದೆ.

ಬಸವಾದಿ ಶರಣ ಸಂಸ್ಕೃತಿಯನ್ನೇ ತಳಪಾಯವಾಗಿಟ್ಟುಕೊಂಡು ಹೆಣ್ಣುಮಕ್ಕಳ ಪರಿಪೂರ್ಣ ವ್ಯಕ್ತಿತ್ವ ವಿಕಸನಕ್ಕಾಗಿ, ರಾಜ್ಯ ಸರ್ಕಾರದ ಶಾಲಾ ಪಠ್ಯದ ಜೊತೆಗೆ ಶರಣ ಸಂಸ್ಕೃತಿಯ ವಿಶೇಷ ಅಧ್ಯಯನ ಮಾಡಿಸುವ ನಿಟ್ಟಿನಲ್ಲಿ ವಿದ್ಯಾಲಯವನ್ನು ಪ್ರಾರಂಭಿಸಲಾಗಿದೆ. ಅದರ ಪ್ರವೇಶಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಪರೀಕ್ಷೆಗೆ ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ವಿದ್ಯಾಲಯದ ಸಂಚಾಲಕಿ, ಸುವರ್ಣ ಚಿಮಕೊಡೆ 80509 64650, 94496 25773 ಈ ಮೊ. ಸಂಖ್ಯೆಗೆ ಸಂಪರ್ಕಿಸಬಹುದು.

Share This Article
Leave a comment

Leave a Reply

Your email address will not be published. Required fields are marked *