ಔರಾದ
ವಿಶ್ವಗುರು ಬಸವಣ್ಣನವರ ಕರ್ಮಭೂಮಿ, ಬಸವಾದಿ ಶರಣರು ನಡೆದಾಡಿದ ಪುಣ್ಯಕ್ಷೇತ್ರ ಬಸವಕಲ್ಯಾಣದಲ್ಲಿ ಇದೇ ನ. 23 ಮತ್ತು 24 ರಂದು 45ನೇ ಶರಣ ಕಮ್ಮಟ ಮತ್ತು ಅನುಭವ ಮಂಟಪ ಉತ್ಸವ ನಡೆಯಲಿದ್ದು, ಬಸವಾಭಿಮಾನಿಗಳು ಸಹಸ್ರ ಸಂಖ್ಯೆಯಲ್ಲಿ ಪಾಲ್ಗೊಂಡು ಉತ್ಸವವನ್ನು ಯಶಸ್ವಿಗೊಳಿಸಬೇಕೆಂದು ಭಾರತೀಯ ಬಸವ ಬಳಗದ ಜಿಲ್ಲಾಧ್ಯಕ್ಷ ಡಾ. ಸಂಜೀವಕುಮಾರ ಜುಮ್ಮಾ ಮನವಿ ಮಾಡಿದ್ದಾರೆ.
ಈ ಕುರಿತು ಶುಕ್ರವಾರ ಪತ್ರಿಕಾ ಪ್ರಕಟಣೆ ನೀಡಿದ ಅವರು, ನಡೆಯಲಿರುವ ಉತ್ಸವದಲ್ಲಿ ನಾಡಿನ ಬಸವಾನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು.
ಉತ್ಸವ ಬಸವಾದಿ ಶರಣರ ವೈಚಾರಿಕ ಕ್ರಾಂತಿ ಸ್ಮರಿಸಿ, ಅದನ್ನು ಮುಂದುವರಿಸಿಕೊಂಡು ಹೋಗುವ ಉತ್ಸವವಾಗಿದೆ. ಕಾಯಕ, ದಾಸೋಹ, ಮಾನವೀಯತೆ, ವರ್ಣರಹಿತ, ಧರ್ಮಸಹಿತ ಸಮಾಜ ನಿರ್ಮಾಣದ ಉತ್ಸವವ ಇದಾಗಿದೆ ಎಂದು ಅವರು ಹೇಳಿದ್ದಾರೆ.
ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ನ ಅಧ್ಯಕ್ಷರಾದ ಮೇಲೆ ಶರಣ ಕಮ್ಮಟ ಮತ್ತು ಅನುಭವ ಮಂಟಪ ಉತ್ಸವಕ್ಕೆ ಹೊಸ ಮೆರಗು ಬಂದಿದೆ.
ಪ್ರತಿವರ್ಷ ಎರಡು ದಿವಸ ಅರ್ಥಪೂರ್ಣ ಸಮಾರಂಭ ಆಯೋಜಿಸುವ ಮೂಲಕ ಬಸವಾದಿ ಶರಣರನ್ನು ಸ್ಮರಣೆ ಮಾಡುತ್ತಿರುವುದು ಮಾದರಿ ಎನಿಸಿದೆ. ಮುಂದಿನ ದಿನಗಳಲ್ಲಿ ಅನುಭವ ಮಂಟಪ ಉತ್ಸವ ರಾಜ್ಯ ಮತ್ತು ರಾಷ್ಟ್ರದ ಗಮನ ಸಳೆಯುಂತಾಗಬೇಕು. ಈ ನಿಟ್ಟಿನಲ್ಲಿ ಎಲ್ಲರು ಅಗತ್ಯ ಸಹಾಯ ಸಹಕಾರ ನೀಡಬೇಕಿದೆ ಎಂದು ತಿಳಿಸಿದರು.