ಅನುಭವ ಮಂಟಪ ಉತ್ಸವ: ರಥಯಾತ್ರೆಗೆ ಚಾಲನೆ ನೀಡಿದ ಸಿದ್ದರಾಮಯ್ಯ

ಬಸವ ಮೀಡಿಯಾ
ಬಸವ ಮೀಡಿಯಾ

ಬಸವಣ್ಣನವರ ವಿಚಾರಗಳನ್ನು ಪ್ರಚಾರ ಮಾಡಲು ರಥ ರಾಜ್ಯದಲ್ಲಿ ಸಂಚರಿಸಲಿದೆ; ಜೊತೆಗೆ ಲಾಂಛನ ಬಿಡುಗಡೆ

ಬೆಂಗಳೂರು

ಬಸವ ಜಯಂತಿ ನಿಮಿತ್ತ ಅನುಭವ ಮಂಟಪ, ಬಸವಾದಿ ಶರಣರ ವೈಭವ ಹೆಸರಿನಲ್ಲಿ ಇದೇ ತಿಂಗಳ 29 ಮತ್ತು 30 ರಂದು ಎರಡು ದಿನಗಳ ಬಸವಣ್ಣನವರ ಐಕ್ಯ ಸ್ಥಳವಾದ ಕೂಡಲ ಸಂಗಮದಲ್ಲಿ ಸರಕಾರದ ವತಿಯಿಂದ ವಿಶೇಷ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಧಾನಸೌಧದಲ್ಲಿ ಇಂದು ಆಯೋಜಿಸಲಾಗಿದ್ದ ‘ಅನುಭವ ಮಂಟಪ- ಬಸವಾದಿ ಶರಣರ ವೈಭವ’ ಕಾರ್ಯಕ್ರಮದ ಲಾಂಛನ ಬಿಡುಗಡೆ ಮತ್ತು ರಥಯಾತ್ರೆಗೆ ಚಾಲನೆ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದರು.

ಅನುಭವ ಮಂಟಪ- ಬಸವಾದಿ ಶರಣರ ವೈಭವ’ ರಥಯಾತ್ರೆಯು ಇಡೀ ರಾಜ್ಯದಲ್ಲಿ ಪ್ರಯಾಣ ಮಾಡಲಿದೆ. ಇದರಿಂದ ವಚನ ಸಾಹಿತ್ಯದ ಪರಿಚಯ, ಬಸವಣ್ಣನವರ ವಿಚಾರಗಳು ಹೆಚ್ಚು ಪ್ರಚಾರವಾಗುತ್ತದೆ.

ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ನಮ್ಮ ಸರ್ಕಾರ ಘೋಷಣೆಯನ್ನು ಮಾಡಿದೆ. ಕೇವಲ ಘೋಷಣೆ ಮಾತ್ರವಲ್ಲ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಒಪ್ಪಿಕೊಂಡು ಜಾರಿ ಮಾಡಿದ್ದು ನಾವು. ಬಸವಣ್ಣ ಸಾಮಾಜಿಕ ಕ್ರಾಂತಿ ಮಾಡಿದವರು. ಸಮಾಜದಲ್ಲಿನ ಸಾಮಾಜಿಕ ರೋಗಗಳಿಗೆ ಪರಿಹಾರವನ್ನು ಸೂಚಿಸಿದ್ದು ಮಾತ್ರವಲ್ಲದೇ ನುಡಿದಂತೆ ನಡೆದರು ಹಾಗೂ ನಡೆದಂತೆ ನುಡಿದರು.

ಕಳೆದ ಬಾರಿ ನಮ್ಮ ಸರ್ಕಾರದ ಅವಧಿಯಲ್ಲಿ ಬಸವ ಕಲ್ಯಾಣದ ಪುನರುತ್ಥಾನ ಮಾಡಲು ಹಿರಿಯ ಸಾಹಿತಿ ಗೊ.ರು. ಚನ್ನಬಸಪ್ಪ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿತ್ತು. ಪುನರುತ್ಥಾನದ ಕೆಲಸವನ್ನು ಈ ಬಾರಿ ಪೂರೈಸಲಾಗುವುದು, ಎಂದು ಮುಖ್ಯಮಂತ್ರಿಗಳು ಹೇಳಿದರು.

ಬೈಲೂರು ನಿಷ್ಕಲ ಮಂಟಪದ ಪೂಜ್ಯ ಶ್ರೀ ನಿಜಗುಣಪ್ರಭು ತೋಂಟದಾರ್ಯ ಮಹಾಸ್ವಾಮಿಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದರು.

ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಶಿವರಾಜ ತಂಗಡಗಿ, ಶ್ರೀ ಆರ್. ಬಿ. ತಿಮ್ಮಾಪುರ, ಶ್ರೀ ಹೆಚ್. ಕೆ. ಪಾಟೀಲ, ಡಾ||ಶರಣಪ್ರಕಾಶ್ ಪಾಟೀಲ, ಶ್ರೀ ಎಂ.ಬಿ.ಪಾಟೀಲ, ಕೆ.ಜೆ. ಜಾರ್ಜ್, ಶಾಸಕ ಮಿತ್ರರು, ನಾಡೋಜ ಹಂ.ಪ. ನಾಗರಾಜಯ್ಯ, ಶ್ರೀಮತಿ ಬಿ.ಟಿ. ಲಲಿತಾನಾಯಕ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ_
https://chat.whatsapp.com/CbYKNyyLfPXA0Br4Dli0d8

Share This Article
1 Comment
  • CM ಅವರ ಮಾದರಿ ಕಾರ್ಯಕ್ರಮ ಕ್ಕೆ ಅನಂತ ಶರಣು ಶರಣಾರ್ಥಿ

Leave a Reply

Your email address will not be published. Required fields are marked *