ಅಪ್ಪಣ್ಣ ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ: ಶಾಸಕರ ಭರವಸೆ

ಬೀಳಗಿ

ಹಡಪದ ಅಪ್ಪಣ್ಣ ಸಮಾಜ ಬಾಂಧವರು ಸಮಾಜದ ಕಾರ್ಯಚಟುವಟಿಕೆಗಳಿಗಾಗಿ ಸಮುದಾಯ ಭವನ ನಿರ್ಮಿಸುವ ಉದ್ದೇಶ ಹೊಂದಿದ್ದು, ಇದಕ್ಕೆ ₹ 20 ಲಕ್ಷ ಅನುದಾನ ನೀಡಲಾಗುವುದು ಎಂದು ಶಾಸಕ ಜೆ.ಟಿ. ಪಾಟೀಲ ಹೇಳಿದರು.

ಇಲ್ಲಿನ ಬಸವೇಶ್ವರ ದೇವಾಲಯದ ಸಭಾಭವನದಲ್ಲಿ ಗುರುವಾರ ನಿಜಶರಣ ಹಡಪದ ಅಪ್ಪಣ್ಣ ಅವರ 891ನೇ ಜಯಂತ್ಯುತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಿರಂತರ ದುಡಿಮೆ ಕಾಯಕ ಮಾಡುವ ಹಡಪದ ಅಪ್ಪಣ್ಣ ಸಮಾಜ, ನಿತ್ಯ ಕ್ಷೌರಿಕ ವೃತ್ತಿ ಮಾಡಿ ಜೀವನ ಸಾಗಿಸುವರು. ಈ ಸಮಾಜದ ಬಹುತೇಕ ಕುಟುಂಬಗಳು ಜಮೀನು ಇಲ್ಲದೆ ಜೀವನ ಸಾಗಿಸುತ್ತಿವೆ. ಸಮಾಜದ ಅಭಿವೃದ್ಧಿಗೆ ಸರ್ಕಾರದಿಂದ ಎಲ್ಲ ರೀತಿಯ ಸೌಲಭ್ಯ ನೀಡಲಾಗುವುದು, ಜೊತೆಗೆ ಹಡಪದ ಅಪ್ಪಣ್ಣ ಅಭಿವೃದ್ಧಿ ನಿಗಮದ ಕುರಿತಾಗಿ ಚರ್ಚಿಸಿ ನಿಗಮಕ್ಕೆ ಹಣಕಾಸು ಮಂಜೂರು ಆಗುವಂತೆ ಮುಖ್ಯಮಂತ್ರಿಯ ಗಮನಕ್ಕೆ ತರಲಾಗುವುದು ಎಂದು ಹೇಳಿದರು.

ಸಮಾಜದವರು ಶ್ರಮ ಜೀವಿಗಳಾಗಿದ್ದು, ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಯುವಕರು ದುಶ್ಚಟಗಳಿಗೆ ಬಲಿಯಾಗಬೇಡಿ ಎಂದು ಕಿವಿಮಾತು ಹೇಳಿದರು.

ತಗಂಡಗಿಯ ಹಡಪದ ಅಪ್ಪಣ್ಣ ಮಹಾಸಂಸ್ಥಾನ ಮಠದ ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ನ್ಯಾಯವಾದಿ ರಾಜು ಜಡ್ರಾಮಕುಂಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಾವಿತ್ರಿ ಶರಣಮ್ಮನವರು, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲ್ಲೂಕಾ ಅಧ್ಯಕ್ಷ ಅಣವೀರಯ್ಯ ಪ್ಯಾಟಿಮಠ , ವಿನಯ ತಿಮ್ಮಾಪೂರ, ಮುತ್ತು ಬೋಜಿ೯, ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಪ್ರವೀಣ ಪಾಟೀಲ, ಸಿಪಿಐ ಎಚ್. ಬಿ. ಸನಮನಿ, ಕಾಂಗ್ರೆಸ್ ತಾಲ್ಲೂಕು ಅಧ್ಯಕ್ಷ ಹಣಮಂತ ಕಾಖಂಡಕಿ, ಬಿಜೆಪಿ ತಾಲ್ಲೂಕು ಅಧ್ಯಕ್ಷ ಹೊಳಬಸು ಬಾಳಶೆಟ್ಟಿ, ಡಿ.ಎಸ್.ಎಸ್ ಬೆಳಗಾವಿ ವಿಭಾಗೀಯ ಅಧ್ಯಕ್ಷ ಮಹಾದೇವ ಹಾದಿಮನಿ, ಪ.ಪಂ ಸದಸ್ಯ ಸಂತೋಷ ನಿಂಬಾಳಕರ, ಎಚ್.ಡಿ. ವೈದ್ಯ, ಮಲ್ಲಿಕಾರ್ಜುನ ಹಡಪದ, ರವಿ ಕೋಲಾರ, ನಾಗರಾಜ ಹಡಪದ ಮತ್ತಿತರರು ಇದ್ದರು.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/CPORn7EbNfEBlG1MCXUuM

Share This Article
Leave a comment

Leave a Reply

Your email address will not be published. Required fields are marked *