ಕೂಡಲಸಂಗಮ
ಕೂಡಲಸಂಗಮದ ಪೀಠದಲ್ಲಿ ರಾಜ್ಯಮಟ್ಟದ ಪಂಚಮಸಾಲಿ ಸಮಾಜದ ಸಭೆಯನ್ನು ಬೆಳಗ್ಗೆ 11.30 ಗಂಟೆಗೆ ಕರೆಯಲಾಗಿದೆ.
ಸಭೆಯಲ್ಲಿ ಸಚಿವರು, ಶಾಸಕರು, ಮಾಜಿ ಶಾಸಕರು, ಟ್ರಸ್ಟಿನ ಎಲ್ಲ ಸದಸ್ಯರು, ಹಿರಿಯರು, ಯುವ ಮುಖಂಡರು, ಜಿಲ್ಲೆಯ, ತಾಲೂಕಿನ ಎಲ್ಲ ಘಟಕಗಳು, ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ, ಎಂದು ಮುಖಂಡ ಅಮರೇಶ ನಾಗೂರ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಹೇಳಿದರು.
ಕಳೆದ ಕೆಲವು ವರ್ಷಗಳಿಂದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಪೀಠವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ. ಮೀಸಲಾತಿ ಹೋರಾಟವನ್ನು ಒಂದು ಪಕ್ಷದ ಬ್ಯಾನರ್ ಅಡಿಯಲ್ಲಿ ಹೋರಾಟವನ್ನು ಮಾಡುತ್ತಿದ್ದಾರೆ. ಮೀಸಲಾತಿ ಹೋರಾಟದಲ್ಲಿ ಮೊದಲು ಪಕ್ಷಾತೀತ, ಜಾತ್ಯಾತೀತವಾಗಿ ಮಾಡುತ್ತಿದ್ದೇವು. ಮೀಸಲಾತಿ ಹೋರಾಟದಲ್ಲಿ ಸಮಾಜದವರು ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳಬಾರದು ಎಂದು ಹೇಳಿದರೂ ಶ್ರೀಗಳು ಅದನ್ನು ಮುಂದುವರೆಸಿದ್ದಾರೆ ಎಂದು ಆರೋಪಿಸಿದರು.
ಇತ್ತೀಚೆಗೆ ಬಿಜೆಪಿ ಪಕ್ಷದಿಂದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಉಚ್ಚಾಟನೆ ಮಾಡಿದ್ದನ್ನು ಖಂಡಿಸಲಿ. ಆದರೆ, ಅವರ ಏಜೆಂಟರಂತೆ ವರ್ತಿಸುತ್ತಿದ್ದಾರೆ. ಅವರ ಪರ ನಿಲ್ಲುವುದು ಎಷ್ಟು ಸೂಕ್ತ ಎಂದು ಪ್ರಶ್ನಿಸಿದರು.
ಗೋಷ್ಠಿಯಲ್ಲಿ ಮುಖಂಡರಾದ ಸಂಗಣ್ಣ ಗಂಜಿಹಾಳ, ಗಂಗಣ್ಣ ಬಾಗೇವಾಡಿ, ಶಿವಾನಂದ ಘಂಟಿ, ಸಿದ್ದಪ್ಪ ಹೊಸೂರ, ಮಂಜುನಾಥ ಪುರತಗೇರಿ, ಚನ್ನವೀರ ಅಂಗಡಿ ಇದ್ದರು.
ಸಮಾಜದ ಹಲವಾರು ಮುಖಂಡರ ಆಕ್ರೋಶಕ್ಕೆ ಗುರಿಯಾಗಿರುವ ಜಯಮೃತ್ಯುಂಜಯ ಸ್ವಾಮೀಜಿ ಏಪ್ರಿಲ್ 20 ರಂದು ರಾಜ್ಯ ಮಟ್ಟದ ಸಭೆ ಕರೆದಿದ್ದಾರೆ. ಅದಕ್ಕೆ ಒಂದು ದಿನದ ಮುನ್ನವೇ ಪಂಚಮಸಾಲಿ ಮುಖಂಡರ ಅದೇ ಸ್ಥಳದಲ್ಲಿ ನಡೆಯಲಿದೆ.