ಬೆಂಗಳೂರು
ಅಸಮಾನತೆ ಹೋಗಬೇಕಾದರೆ ಬದಲಾವಣೆ ಅಗತ್ಯ. ಎಲ್ಲರಿಗೂ ಆರ್ಥಿಕ, ಸಾಮಾಜಿಕ ಶಕ್ತಿ ಬಂದಾಗ ಮಾತ್ರ ಅಸಮಾನತೆ ಹೋಗಲು ಸಾಧ್ಯ. ಈ ಬದಲಾವಣೆ ತರಲು ಬಸವಣ್ಣನವರು ಹಾಕಿಕೊಟ್ಟ ದಾರಿಯಲ್ಲಿ ನಡೆಯುವ ಪ್ರಯತ್ನವನ್ನು ನಿಜವಾಗಿ ಮಾಡುತ್ತಿದ್ದೇನೆ, ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದರು.
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಹಾಗೂ ರಮಣಶ್ರೀ ಪ್ರತಿಷ್ಠಾನ ಸಹಯೋಗದಲ್ಲಿ ಆಯೋಜಿಸಿದ್ದ 19ನೇ ವರ್ಷದ “ರಮಣಶ್ರೀ ಶರಣ ಪ್ರಶಸ್ತಿ ಪ್ರದಾನ” ಸಮಾರಂಭದಲ್ಲಿ ಮಾತನಾಡುತ್ತ ಸಮ, ವೈಚಾರಿಕ ಸಮಾಜ ಸ್ಥಾಪಿಸಲು ಬಸವಾದಿ ಶರಣರು ನಡೆಸಿದ ಹೋರಾಟವನ್ನು ಸ್ಮರಿಸಿಕೊಂಡರು.
ಸಮಾನತೆಯ ಸಮಾಜ ನಿರ್ಮಾಣವಾಗಲು ಜಾತಿ ವ್ಯವಸ್ಥೆ ಹೋಗಬೇಕು. ಎಲ್ಲರಿಗೂ ಸಮಾನ ಅವಕಾಶಗಳು ಸಿಗಬೇಕು.
ಆರ್ಥಿಕ, ಸಾಮಾಜಿಕ ಅಸಮಾನತೆ ಹೋಗಲಾಡಿಸಲು ಬಸವಾದಿ ಶರಣರ ಕನಸು ನನಸಾಗಿಸಬೇಕು. ಬಸವಾದಿ ಶರಣರು ಹೇಳಿದಂತೆ ಇವನಾರವ ಎಂದು ಎಣಿಸದೆ ಇವ ನಮ್ಮವ ಎಂದು ಎಣಿಸಬೇಕು. ವಚನಗಳನ್ನು ಹೇಳುತ್ತಲೇ ನೀವು ಯಾವ ಜಾತಿ ಎಂದು ಕೇಳುತ್ತವೆ. ಇದನ್ನು ಮೊದಲು ನಾವು ಬಿಡಬೇಕು.
ಕರ್ಮ ಸಿದ್ಧಾಂತ ಇರಬಾರದು. ಇದನ್ನು ಈಗಲೂ ಬಹಳ ಜನ ಪರಿಪಾಲಿಸುತ್ತಾರೆ. ವಿದ್ಯಾವಂತರೂ ಕೂಡ ಹಣೆಬರಹದಲ್ಲಿ ನಂಬಿಕೆ ಇಡುತ್ತಾರೆ. ವೈಚಾರಿಕತೆ, ವೈಜ್ಞಾನಿಕತೆಯಿಂದ ಕೂಡಿದ ಸಮಾಜದಿಂದ ಮಾತ್ರ ಇದಕ್ಕೆ ಪರಿಹಾರ ಸಿಗಲಿದೆ. ಗೊತ್ತಿದ್ದೋ, ಗೊತ್ತಿಲ್ಲದೆಯೋ ಮೌಢ್ಯ, ಕಂದಾಚಾರಗಳನ್ನು ಆಚರಿಸುತ್ತೇವೆ. ಇದನ್ನು ಬಿಟ್ಟಾಗ ಮಾತ್ರ ಬಸವಾದಿ ಶರಣರಿಗೆ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ.
ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ಜಾರಿಗೆ ಬಂದಾಗ ವೈರುಧ್ಯತೆಯಿರುವ ಸಮಾಜಕ್ಕೆ ಕಾಲಿಡುತ್ತಿದ್ದೇವೆ ಎಂದಿದ್ದರು. ರಾಜಕೀಯ ಸಮಾನತೆ ಸಿಕ್ಕಿದ್ದರೂ, ಆರ್ಥಿಕ ಮತ್ತು ಸಾಮಾಜಿಕ ಪ್ರಜಾಪ್ರಭುತ್ವ ಸಿಕ್ಕಿಲ್ಲ. ಬಸವಾದಿ ಶರಣರು ಇದನ್ನು 850 ವರ್ಷಗಳ ಹಿಂದೆಯೇ ಪ್ರತಿಪಾದಿಸಿದ್ದರು, ಎಂದು ಹೇಳಿದರು.
ಸದಾ ಬಸವ ತಂದೆಯ ತತ್ವಗಳನ್ನು ಆಡಳಿತದಲ್ಲಿ ಜಾರಿಗೆತರುವ ಚಿಂತನೆ ನಮ್ಮ ಹೆಮ್ಮಯ ಮುಖ್ಯಮಂತ್ರಿಗಳು ಸಿದ್ದರಾಮಯ್ಯನವರು ಅವರನ್ನು ಬಸವ ಭಕ್ತರು ಸದಾ ನೆನೆಯಲೆ ಬೇಕು.
ಬಸವಣ್ಣನವರ ತತ್ವಗಳನ್ನು ಒಪ್ಪಿದವರು ಯಾರು ಪುಗ್ಶೆಟ್ಟಿ ದುಡ್ಡು ಅಕ್ಕಿ ಕೊಡುವುದಿಲ್ಲ ದುಡಿದು ತಿನ್ನುವ ಕಾಯಕ ಧರ್ಮ ನಮ್ಮದು ನಮ್ಮ ಧರ್ಮ. ಆದರೆ ಸಿದ್ದರಾಮಯ್ಯನವರು ಉಚಿತ ಗ್ಯಾರಂಟಿಗಳ ಮೂಲಕ ಕಾಯಕ ಧರ್ಮಕ್ಕೆ ಮೋಸ ಮಾಡುತ್ತಿದ್ದಾರೆ ಅವರು ಏನಾದರೂ ಬಸವಣ್ಣನವರ ಮೇಲೆ ಅಭಿಮಾನ ಇದ್ದರೆ ದುಡಿದು ತಿನ್ನಲಿಕ್ಕೆ ಯುವಕರಿಗೆ ಸ್ವಂತ ಉದ್ಯೋಗ ಮಾಡಲು ಸರ್ಕಾರದಿಂದ ಸಬ್ಸಿಡಿ ರಹಿತ ಅನುದಾನ ಬಿಡುಗಡೆ ಮಾಡಿ ಅವರನ್ನು ನಿರುದ್ಯೋಗದಿಂದ ಉದ್ಯೋಗವಂತರನ್ನಾಗಿ ಮಾಡಿ ದೇಶದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುವಂತೆ ನೋಡಿಕೊಳ್ಳುವುದು ಅವರ ಕೆಲಸ