ಅಪ್ರಾಪ್ತ ಬಾಲಕಿ ಆತ್ಮಹತ್ಯೆ: ಜೇವರ್ಗಿ ಪಟ್ಟಣ ಸಂಪೂರ್ಣ ಬಂದ್

ಬಸವ ಮೀಡಿಯಾ
ಬಸವ ಮೀಡಿಯಾ

ಕಲಬುರಗಿ

ಜೇವರ್ಗಿ ಪಟ್ಟಣದಲ್ಲಿ ಇತ್ತೀಚೆಗೆ ಯುವಕನೊಬ್ಬನ ಕಿರುಕುಳಕ್ಕೆ ಬೇಸತ್ತು ಅಪ್ರಾಪ್ತ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣವನ್ನು ಖಂಡಿಸಿ ಗುರುವಾರ ಹಲವಾರು ಸಂಘಟನೆಗಳು ಕರೆ ನೀಡಿದ್ದ ಬಂದ್ ಯಶಸ್ವೀಯಾಗಿದೆ.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ಹಿಂದೂ ಜಾಗೃತಿ ಸೇನೆ ಮತ್ತು ಇತರ ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ,ಜಿಲ್ಲಾಡಳಿತದ ಮೂಲಕ ಗೃಹಸಚಿವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನಾಕಾರರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟೈರ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಪ್ರಮುಖ ಬೀದಿಗಳಲ್ಲಿ ಸಂಚಾರ ಸಂಪೂರ್ಣವಾಗಿ ನಿಂತಿತು. ಮುಖ್ಯ ರಸ್ತೆಯಲ್ಲಿ ಇರುವ ಅಂಗಡಿ ಮುಂಗಟ್ಟುಗಳು ಸಹ ವ್ಯಾಪಾರಿಗಳು ಮುಚ್ಚುವ ಮೂಲಕ ಬಂದ್ ಬೆಂಬಲ ವ್ಯಕ್ತಪಡಿಸಿದರು.

ಅಪ್ರಾಪ್ತ ಬಾಲಕಿಗೆ ಎಂದು ಕಿರುಕುಳ ನೀಡಿ, ಆಕೆಯ ಆತ್ಮಹತ್ಯೆಗೆ ಕಾರಣವಾದ ಆರೋಪಿ ಮಾಹಿಬೂಬ್ ಎಂಬಾತನ್ನು ಕೇವಲ ಬಂಧಿಸಿದರೆ ಸಾಲದು, ಕಠಿಣ ಶಿಕ್ಷೆ ನೀಡಬೇಕು. ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಮುಖಂಡರು ಆಗ್ರಹಿಸಿದ್ದಾರೆ.

ಕಲಬುರಗಿ ಜಿಲ್ಲೆಯಲ್ಲಿ ಇಂತಹ ಅನೇಕ ಘಟನೆ ನಡೆದ ಉದಾಹರಣೆಗಳಿವೆ. ಅನ್ಯಕೋಮಿನ ಯುವಕರು ಹಿಂದೂ ಮಹಿಳೆಯರನ್ನು ಟಾರ್ಗೆಟ್ ಮಾಡಿ ಅವರನ್ನ ಪ್ರೀತಿ ಪ್ರೇಮ ಅಂತ ಪೀಡಿಸುವುದು ದಿನನಿತ್ಯ ನಡೆಯುತ್ತಿದ್ದು ಇಂತಹ ಘಟನೆಗಳನ್ನು ತಡೆಯುವಲ್ಲಿ ಪೆÇಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ.

ಆತ್ಮಹತ್ಯೆ ಮಾಡಿಕೊಂಡ ಅಪ್ರಾಪ್ತ ಯುವತಿಯ ಕುಟುಂಬಕ್ಕೆ ಸರ್ಕಾರದಿಂದ ಧನ ಸಹಾಯ ನೀಡಬೇಕು ಇಂತಹ ಘಟನೆ ನಡೆಯದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು.

ಲಕ್ಷ್ಮೀಕಾಂತ ಸ್ವಾದಿ, ಎಂ.ಎಸ್ ಪಾಟೀಲ ನರಿಬೋಳ, ಸುನೀಲ ಶಿರ್ಕೆ,ಮಹೇಶ ಕೆಂಭಾವಿ,ಅನುದೀಪ್ ದಂಡೋತಿ,ಶರಣಗೌಡ ಪೊಲೀಸ್ ಪಾಟೀಲ ನರಿಬೋಳ,ರಾಮಸೇವಕ ಶಿವು,ದಶರಥ ಇಂಗೋಳೆ, ಚಿದಾನಂದ ಮಠಪತಿ,ಸುಮಾ ಕವಲ್ದಾರ,ಸಿದ್ದು ಕಂದಗಲ್‍ಅವರು ಸೇರಿದಂತೆ ಹಲವರು ಪಾಲ್ಗೊಂಡರು.

Share This Article
Leave a comment

Leave a Reply

Your email address will not be published. Required fields are marked *