‘ಗುರುಬಸವ ಬಣಜಿಗ ಭವನ’ ನಿರ್ಮಾಣದ ಭೂಮಿಪೂಜೆ

ಬಸವ ಮೀಡಿಯಾ
ಬಸವ ಮೀಡಿಯಾ

ಕೊಪ್ಪಳ:

ನಗರದಲ್ಲಿ ಈಚೆಗೆ ‘ಗುರುಬಸವ ಬಣಜಿಗರ ಭವನ’ ನಿರ್ಮಾಣಕ್ಕೆ ಭೂಮಿಪೂಜೆ ಹಾಗೂ ಬಣಜಿಗ ಸಮಾಜದ ಸಂಸ್ಥಾಪನಾ ದಿನಾಚರಣೆ ಸಮಾರಂಭ ನಡೆಯಿತು.

ಗವಿಮಠದ ಶ್ರೀ ಗವಿಸಿದ್ದೇಶ್ವರ ಸ್ವಾಮೀಜಿ ಸಾನಿಧ್ಯ ವಹಿಸಿ ಮಾತನಾಡುತ್ತ, ಸಮಾಜದ ಉಪಯುಕ್ತ ಕೆಲಸಗಳಿಗಾಗಿ ಗುರುಬಸವ ಬಣಜಿಗ ಭವನ ನಿರ್ಮಾಣಕ್ಕೆ ಭೂಮಿಪೂಜೆ ಮಾಡಿರುವುದು ಶ್ಲಾಘನೀಯ.

ಇದು ಬೇಗ ಪೂರ್ಣಗೊಳ್ಳಲಿ, ಇಂತಹ ಕಾರ್ಯಗಳಿಂದ ಸಮಾಜಕ್ಕೆ ಸಾಕಷ್ಟು ಅನುಕೂಲವಾಗುತ್ತದೆ. ಸಮಾಜದಲ್ಲಿ ಮತ್ತಷ್ಟು ಇಂತಹ ಉತ್ತಮ ಕೆಲಸಗಳಾಗಲಿ ಎಂದು ಹಾರೈಸಿದರು.

ಸಂಸದ ಕೆ.ರಾಜಶೇಖರ ಹಿಟ್ನಾಳ್ ಮಾತನಾಡಿ, ಬಣಜಿಗ ಸಮುದಾಯ ಆರ್ಥಿಕ ಹಾಗೂ ಸಾಮಾಜಿಕವಾಗಿ ಎಲ್ಲರನ್ನು ಬೆಳೆಸುತ್ತಿದೆ. ಸಮುದಾಯ ಭವನ ನಿರ್ಮಾಣದಿಂದ ಸಮಾಜಕ್ಕೆ ಮತ್ತಷ್ಟು ಶಕ್ತಿ ಬರಲಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಕೆಲಸಗಳಾಗಲಿ ಎಂದು ಆಶಿಸಿದರು.

ಮಾಜಿ ಸಂಸದ ಸಂಗಣ್ಣ ಕರಡಿ ಮಾತನಾಡಿ, ಸಮುದಾಯ ಪ್ರಾಮಾಣಿಕವಾಗಿ ಶಿಸ್ತು ಒಗ್ಗಟ್ಟಿನಿಂದ ಇದ್ದು ಇದು ಎಲ್ಲರಿಗೂ ಮಾದರಿಯಾಗಿದೆ ಎಂದು ಹೇಳಿದರು.

ವಿಧಾನಸಭೆ ಮುಖ್ಯ ಸಚೇತಕ, ರಾಮದುರ್ಗ ಶಾಸಕ ಅಶೋಕ ಪಟ್ಟಣ, ಮಹೇಶ ತೆಂಗಿನಕಾಯಿ ಮಾತನಾಡಿದರು.

ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ವಿಶ್ವನಾಥ ಬಳ್ಳೊಳ್ಳಿ, ತಾಲೂಕಾಧ್ಯಕ್ಷ ವೀರಣ್ಣ ಬುಳ್ಳಾ, ಮಾಜಿ ಶಾಸಕ ಪರಣ್ಣ ಮುನವಳ್ಳಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಸನ್ನ ಗಡಾದ, ಮುಖಂಡರಾದ ಸಿ.ವಿ. ಚಂದ್ರಶೇಖರ, ಡಾ. ಬಸವರಾಜ ಕ್ಯಾವಟರ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಹಾಂತೇಶ ಮೈನಹಳ್ಳಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಬಸವ ಮೀಡಿಯಾ Facebook ಪುಟ ಸೇರಲು ಕ್ಲಿಕ್ ಮಾಡಿ
https://www.facebook.com/basavamedia1/

Share This Article
Leave a comment

Leave a Reply

Your email address will not be published. Required fields are marked *