ಬಾನು ಮುಷ್ತಾಕರ ಕನ್ನಡ ಪುಸ್ತಕಕ್ಕೆ ಇಂಟರ್ ನ್ಯಾಷನಲ್ ಬೂಕರ್ ಪ್ರಶಸ್ತಿ

ಬಸವ ಮೀಡಿಯಾ
ಬಸವ ಮೀಡಿಯಾ

ಲಂಡನ್‌

ಕನ್ನಡ ಲೇಖಕಿ ಬಾನು ಮುಷ್ತಾಕ್‌ ಅವರ ‘ಹಸೀನಾ ಮತ್ತು ಇತರ ಕತೆಗಳು’ ಕಥಾಸಂಕಲನದ ಇಂಗ್ಲಿಷ್ ಅನುವಾದಿತ ಕೃತಿ ‘ಹಾರ್ಟ್ ಲ್ಯಾಂಪ್’ ಪ್ರತಿಷ್ಠಿತ ಇಂಟರ್ ನ್ಯಾಷನಲ್ ಬೂಕರ್ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದೆ.

ಮೇ.21ರಂದು ಲಂಡನ್‌ನಲ್ಲಿ ನಡೆದ ಸಮಾರಂಭದಲ್ಲಿ ಈ ಕುರಿತ ಅಧಿಕೃತ ಘೋಷಣೆ ಹೊರಬಿದ್ದಿದೆ. ವಿಜೇತ ಲೇಖಕ ಹಾಗೂ ಅನುವಾದಕರಿಗೆ 50,000 ಪೌಂಡ್‌ ಬಹುಮಾನ ಅಂದರೆ, 57.28 ಲಕ್ಷ ರೂಪಾಯಿ ಸಿಗಲಿದೆ.

ಮೇ 2024 ಮತ್ತು ಏಪ್ರಿಲ್ 2025 ರ ನಡುವೆ UK ಮತ್ತು ಐರ್ಲೆಂಡ್‌ನಲ್ಲಿ ಪ್ರಕಟವಾದ ಇಂಗ್ಲಿಷ್‌ಗೆ ಅನುವಾದಿಸಲಾದ ಅತ್ಯುತ್ತಮ ಕಾದಂಬರಿ ಅಥವಾ ಸಣ್ಣ ಕಥೆಗಳ ಸಂಗ್ರಹಕ್ಕೆ ಈ ವಾರ್ಷಿಕ ಪ್ರಶಸ್ತಿಯನ್ನು ನೀಡಲಾಗುತ್ತದೆ.

ಬಾನು ಮುಷ್ತಾಕ್ ಅವರು ತಮ್ಮ ಅನುವಾದಕಿ ದೀಪಾ ಭಾಷ್ಟಿ ಅವರೊಂದಿಗೆ ಪ್ರಶಸ್ತಿಯನ್ನು ಸ್ವೀಕರಿಸಿದರು. ಆರು ಕೃತಿಗಳು ಸ್ಪರ್ಧೆಯಲ್ಲಿದ್ದವು. ಆದರೆ, ಮುಷ್ತಾಕ್ ಅವರ ಕೃತಿಯು ತೀರ್ಪುಗಾರರ ಮೆಚ್ಚುಗೆ ಗಳಿಸಿತು. ಅವರ ಬರಹವು ಹಾಸ್ಯ, ಚುರುಕುತನ, ವಾಸ್ತವತೆ ಮತ್ತು ನೋವುಗಳನ್ನು ಒಳಗೊಂಡಿತ್ತು. ಕುಟುಂಬ ಮತ್ತು ಸಮುದಾಯದ ಸಂಬಂಧಗಳನ್ನು ಅದ್ಭುತವಾಗಿ ಚಿತ್ರಿಸಿತ್ತು.

ಬಾನು ಮುಷ್ತಾಕ್ ಅವರು ಪ್ರಶಸ್ತಿ ಸ್ವೀಕರಿಸಿ ಮಾತನಾಡಿ, “ಜಗತ್ತು ನಮ್ಮನ್ನು ವಿಭಜಿಸಲು ಪ್ರಯತ್ನಿಸುತ್ತದೆ. ಆದರೆ ಸಾಹಿತ್ಯವು ನಾವು ಪರಸ್ಪರರ ಮನಸ್ಸಿನಲ್ಲಿ ಬದುಕಲು ಸಾಧ್ಯವಾಗುವ ಪವಿತ್ರ ಸ್ಥಳವಾಗಿದೆ, ಎಂದು ಹೇಳಿದರು.

ನನ್ನ ಸುಂದರವಾದ ಭಾಷೆಗೆ ದೊರೆತ ಎಂತಹ ಸೊಗಸಾದ ಗೆಲುವು ಇದು’ ಎಂದು ಅನುವಾದಕಿ ಭಸ್ತಿ ಹರ್ಷ ವ್ಯಕ್ತಪಡಿಸಿದ್ದಾರೆ.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/KW7PgYimGT7HL73bAEKzSR

Share This Article
Leave a comment

Leave a Reply

Your email address will not be published. Required fields are marked *