ಚಾಮರಾಜನಗರ
‘ಬಸವ ಭವನ ಸಮುದಾಯದ ಆಸ್ತಿಯಾಗಿದ್ದು ಪ್ರತಿಯೊಬ್ಬರೂ ಆರ್ಥಿಕ ಸಹಕಾರ ನೀಡಬೇಕು. ಬಸವ ಭವನಕ್ಕಾಗಿ ಜಿಲ್ಲೆಯಾದ್ಯಂತ ಜೋಳಿಗೆ ಹಿಡಿಯಲು ಸಿದ್ಧ,’ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯಾಧ್ಯಕ್ಷ ಶಂಕರ ಮಹಾದೇವ ಬಿದರಿ ಶನಿವಾರ ಹೇಳಿದರು.
ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಹಮ್ಮಿಕೊಂಡಿದ್ದ ಸಮಾಜದ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ‘ಜಿಲ್ಲೆಯಲ್ಲಿ ಬಸವಭವನ ಕಾಮಗಾರಿ ನಿಧಾನಗತಿಯಲ್ಲಿ ಸಾಗಿರುವುದು ಬೇಸರದ ವಿಚಾರ, ಮುಂದಿನ ಬಸವ ಜಯಂತಿಯೊಳಗೆ ಸಮುದಾಯದ ಎಲ್ಲರ ಸಹಕಾರದೊಂದಿಗೆ ಬಸವ ಭವನ ಉದ್ಘಾಟನೆಯಾಗಬೇಕು,’ ಎಂದು ಹೇಳಿದರು.
‘ವೀರಶೈವ ಮಹಸಾಭಾ ಪದಾಧಿಕಾರಿಗಳು ದುಡಿಮೆಯ ಶೇ 2ರಷ್ಟು, ಸಾಮಾನ್ಯರು ಶೇ 1ರಷ್ಟು ಆರ್ಥಿಕ ನೆರವು ನೀಡಬೇಕು. ಸಂಪನ್ಮೂಲ ಕ್ರೋಡೀಕರಣ ಕಾರ್ಯವನ್ನು ಆಯಾ ಜಿಲ್ಲೆಗಳ ಮಹಾಸಭಾದ ಜಿಲ್ಲಾಧ್ಯಕ್ಷರು ಕಟ್ಟುನಿಟ್ಟಾಗಿ ಮಾಡಬೇಕು’ ಎಂದು ಬಿದರಿ ಸಲಹೆ ನೀಡಿದರು.
ಸಾಲೂರು ಬೃಹನ್ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಅಂತರರಾಷ್ಟ್ರೀಯ ಕೊಕ್ಕೊ ಆಟಗಾರ್ತಿ ಚೈತ್ರಾ ಕುರುಬೂರು, ಸಾಹಿತಿ ಸ್ವಾಮಿ ಪೊನ್ನಾಚಿ, ಶಿಕ್ಷಕಿ ಅನಿತಾ, ಎಂ.ಪಿ.ರಾಜಣ್ಣ, ಡಾ.ಕೆ.ವಿ.ಯೋಗೇಶ್, ಕೆ.ಜಿ.ಶಶಿಕಲಾ, ಪ್ರಕಾಶ್ ಪುಟ್ಟಪ್ಪ, ಹಿನ್ನೆಲೆಗಾಯಕಿ ಶಿವಾನಿ, ಅಕ್ಕಮಹಾದೇವಿ ಮಹಿಳಾ ಭಜನಾಸಂಘದ ಸದಸ್ಯೆಯರನ್ನು ಸನ್ಮಾನಿಸಲಾಯಿತು.
ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಹರವೆ ವಿರಕ್ತಮಠದ ಸರ್ಪಭೂಷಣ ಸ್ವಾಮೀಜಿ, ಸಿದ್ದಮಲ್ಲೇಶರ್ವರ ವಿರಕ್ತಮಠದ ಚನ್ನಬಸವ ಸ್ವಾಮೀಜಿ, ಮರಿಯಾಲ ಮುರುಘರಾಜೇಂದ್ರಸ್ವಾಮಿ ಮಹಾಸಂಸ್ಥಾನದ ಇಮ್ಮಡಿ ಮುರುಘ ರಾಜೇಂದ್ರ ಸ್ವಾಮೀಜಿ, ಗುಂಡ್ಲುಪೇಟೆ ಶಾಸಕ ಗಣೇಶ್ ಪ್ರಸಾದ್, ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ, ಹನೂರು ಮಾಜಿ ಶಾಸಕಿ ಪರಿಮಳಾ ನಾಗಪ್ಪ, ಪ್ರೊ.ಕೆ.ಆರ್.ಮಲ್ಲಿಕಾರ್ಜುಪ್ಪ, ಕಾಡಾ ಅಧ್ಯಕ್ಷ ಮರಿಸ್ವಾಮಿ, ಚುಡಾ ಅಧ್ಯಕ್ಷ ಮೊಹಮ್ಮದ್ ಅಸ್ಗರ್ ಮುನ್ನ, ನಗರಸಭಾ ಅಧ್ಯಕ್ಷ ಸುರೇಶ್, ಮಹಾಸಭಾ ಜಿಲ್ಲಾಧ್ಯಕ್ಷ ಮೂಡ್ಲುಪುರ ನಂದೀಶ್, ಮಹಾಸಭಾ ಕೇಂದ್ರ ಸಮಿತಿ ಸದಸ್ಯ ಎಚ್.ಎಸ್.ಮಹದೇವಸ್ವಾಮಿ, ರಾಷ್ಟ್ರೀಯ ಸಮಿತಿ ಸದಸ್ಯೆ ರೂಪಾ ರಾಜಶೇಖರ್, ರಾಜ್ಯ ಸಮಿತಿ ಸದಸ್ಯ ಸುರೇಂದ್ರ ಇದ್ದರು.
ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/JREWkVu0WPE5tE1y0tzNQ1