ಬಸವ ದಿನಚರಿ ಬಿಡುಗಡೆ ಮತ್ತು ಕವಿಗೋಷ್ಠಿ

ಬೈಲಹೊಂಗಲ:

ಬಸವ ಸಮಿತಿ ವತಿಯಿಂದ ನ.23 ರಂದು ಬೆಳಗ್ಗೆ 10ಕ್ಕೆ ಪಟ್ಟಣದ ಚೆನ್ನಮ್ಮ ಸಮಾಧಿ ರಸ್ತೆಯಲ್ಲಿರುವ ಗಣಾಚಾರಿ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯೋತ್ಸವ ನಿಮಿತ್ತ ಬಸವ ದಿನಚರಿ ಲೋಕಾರ್ಪಣೆ ಹಾಗೂ ರಾಜ್ಯಮಟ್ಟದ ಕವಿಗೋಷ್ಠಿ ಹಮ್ಮಿಕೊಳ್ಳಲಾಗಿದೆ.

ನೇಗಿಲಯೋಗಿ ರೈತ ಸೇವಾ ಸಂಘದ ಜಿಲ್ಲಾಧ್ಯಕ್ಷ ಶಂಕರ ಬೋಳಣ್ಣವರ ಬಸವ ದಿನಚರಿ ಬಿಡುಗಡೆ ಮತ್ತು ಕವಿಗೋಷ್ಠಿ ಉದ್ಘಾಟನೆ ಮಾಡುವರು.

ಕಸಾಪ ತಾಲೂಕ ಅಧ್ಯಕ್ಷ ಎನ್‌. ಆರ್. ಠಕ್ಕಾಯಿ ಅಧ್ಯಕ್ಷತೆ ವಹಿಸುವರು. ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವಿದ್ಯಾವಿಷಯತ್ ಸದಸ್ಯರಾದ ಡಾ. ಚಂದ್ರಶೇಖರ ಗಣಾಚಾರಿ, ಇಬ್ರಾಹಿಮ್ ಮುಲ್ಲಾ, ರವಿಕುಮಾರ ಹುಲಕುಂದ, ಶ್ರೀಶೈಲ ಶರಣಪ್ಪನವರ, ಕಾಶೀಮಸಾಬ ಜಮಾದಾರ ಮುಖ್ಯಅತಿಥಿಗಳಾಗಿರುವರು.

ಕವಿಗೋಷ್ಠಿ ಕಾರ್ಯಕ್ರಮದಲ್ಲಿ ನೂರಕ್ಕು ಹೆಚ್ಚು ಕವಿ, ಕವಿಯತ್ರಿಯರು ಭಾಗವಹಿಸುವರು ಎಂದು ಬಸವ ಸಮಿತಿಯ ಕಾರ್ಯಕಾರಿ ಸಮಿತಿ ಸದಸ್ಯ ಮೋಹನ ಬಸನಗೌಡ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/H81yNL3dGRcHb7EBxL5oqr

Share This Article
Leave a comment

Leave a Reply

Your email address will not be published. Required fields are marked *

ಪ್ರಧಾನ ಕಾರ್ಯದರ್ಶಿ ಜಾಗತಿಕ ಲಿಂಗಾಯತ ಮಹಾಸಭಾ ತಾಲ್ಲೂಕು ಘಟಕ ಬೆಳಗಾವಿ.