ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಶ್ರದ್ದೆ, ಭಕ್ತಿಯ ಬಸವ ಜಯಂತಿ

ಕಲಬುರಗಿ 893ನೇ ಬಸವ ಜಯಂತಿ ಅಂಗವಾಗಿ ಕಲಬುರಗಿ ಕೇಂದ್ರ ಕಾರಾಗೃಹದ ಒಳಾವರಣದಲ್ಲಿ ಸೋಮವಾರ ಭಕ್ತಿಭಾವದಿಂದ ಕಾರ್ಯಕ್ರಮ ನಡೆಯಿತು. ಸಂಸ್ಥೆಯ ಪ್ರಭಾರಿ ಮುಖ್ಯ ಅಧೀಕ್ಷಕರಾದ ಬಿ.ಸುರೇಶ ಅವರು ಜಗಜ್ಯೋತಿ ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಪ್ರತಿಯೊಬ್ಬರೂ ಸೋಮಾರಿತನವನ್ನು ತೊರೆದು ಕಾಯಕದಲ್ಲಿ ತೊಡಗಿಸಿಕೊಳ್ಳಬೇಕು. ಕಾಯಕದಿಂದ ಗಳಿಸಿದ ಸಂಪತ್ತಿನಲ್ಲಿ ಒಂದು ಭಾಗವನ್ನು ಸಮಾಜದ ಏಳಿಗೆಗಾಗಿ ಮೀಸಲಿಡಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಮುಖ್ಯ ವೀಕ್ಷಕರಾದ ಶ್ರೀಕಾಂತ ರಂಜೇರಿ ಅವರು ಕೂಡ ಮಾತನಾಡಿದರು. ನಂತರ … Continue reading ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಶ್ರದ್ದೆ, ಭಕ್ತಿಯ ಬಸವ ಜಯಂತಿ