ಬಸವ ಜಯಂತಿ: ಬೆಳಗಾವಿಯಲ್ಲಿ ಇಷ್ಟಲಿಂಗ ದೀಕ್ಷೆ, ಪೂಜಾ ಕಾರ್ಯಕ್ರಮ

ಸಿ.ಎಂ. ಬೂದಿಹಾಳ
ಸಿ.ಎಂ. ಬೂದಿಹಾಳ

ಬೆಳಗಾವಿ:

ಶುಕ್ರವಾರ ಬೆಳಿಗ್ಗೆ ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕ ಹಾಗೂ ನಾಗನೂರು ರುದ್ರಾಕ್ಷಿಮಠದ ಸಹಯೋಗದಲ್ಲಿ ವಿಶ್ವಗುರು ಬಸವಣ್ಣನವರ ಜಯಂತಿ ಉತ್ಸವ ನಿಮಿತ್ತ, ಸಾಮೂಹಿಕ ಇಷ್ಟಲಿಂಗ ಪೂಜಾ ಕಾರ್ಯಕ್ರಮ ಜರುಗಿತು.

ರುದ್ರಾಕ್ಷಿಮಠದ ಪೂಜ್ಯ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ಸಾನಿಧ್ಯವನ್ನು ವಹಿಸಿ ಆಸಕ್ತ ಭಕ್ತರಿಗೆ ಲಿಂಗದೀಕ್ಷೆ ನೀಡಿದರು. ಪೂಜ್ಯ ಬಸವ ಮಹಾಂತ ಸ್ವಾಮಿಗಳು ಶಿರಸಂಗಿ ಅವರು ಆಶೀರ್ವಚನ ನೀಡಿದರು.

ಸಂಚಾರಿ ಗುರುಬಸವ ಬಳಗದ ಮಹಾಂತೇಶ ತೋರಣಗಟ್ಟಿ ಹಾಗೂ ರಾಜಶೇಖರ ಪಾಟೀಲ ಲಿಂಗಪೂಜಾ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಲಿಂಗಾಯತ ಸಂಸ್ಕೃತಿ ಶಿಬಿರದ ವಿದ್ಯಾರ್ಥಿಗಳು, ಶ್ರೀ ಸಿದ್ಧರಾಮೇಶ್ವರ ಸಂಸ್ಥೆಯ ಸಿಬ್ಬಂದಿ ಹಾಗೂ ಸಾವಿರಾರು ಬಸವ ಭಕ್ತರು ಲಿಂಗಪೂಜೆಯಲ್ಲಿ ಪಾಲ್ಗೊಂಡರು. ಶನಿವಾರ ಎರಡನೇ ದಿನ ಸಹ  ಸಾಮೂಹಿಕ ಲಿಂಗಪೂಜಾ ಪ್ರಾತ್ಯಕ್ಷಿಕೆ ಹಾಗೂ ವಚನ ಪಠಣ ಕಾರ್ಯಕ್ರಮ ಜರುಗಿತು.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/J7ms3D54f67LKI9uBwRD0M

Share This Article
Leave a comment

Leave a Reply

Your email address will not be published. Required fields are marked *