ಬಸವ ಜಯಂತಿ 2025: ರಾಜ್ಯಮಟ್ಟದ ಕವಿಗೋಷ್ಠಿಗೆ ಕವನಗಳ ಆಹ್ವಾನ

ಬಸವ ಮೀಡಿಯಾ
ಬಸವ ಮೀಡಿಯಾ

ಬೈಲಹೊಂಗಲ

ಕೇಂದ್ರ ಬಸವ ಸಮಿತಿ ಬೆಂಗಳೂರು ಇವರ ವತಿಯಿಂದ ಬಸವ ಜಯಂತಿ ನಿಮಿತ್ತ ಚೆನ್ನಮ್ಮಾಜಿಯವರ ಐಕ್ಯ ಸ್ಥಳವಾದ ಬೈಲಹೊಂಗಲದಲ್ಲಿ ಮೇ ನಾಲ್ಕರಂದು ರಾಜ್ಯಮಟ್ಟದ ಕವಿಗೋಷ್ಠಿ ಆಯೋಜಿಸಲಾಗಿದೆ.

ಈ ನಿಮಿತ್ತ ಉದಯೋನ್ಮುಖ ಹಾಗೂ ಪ್ರತಿಭಾವಂತ ಕವಿಗಳಿಂದ ಬಸವೇಶ್ವರರು, ಅಕ್ಕಮಹಾದೇವಿ, ಅಲ್ಲಮಪ್ರಭು, ಸಿದ್ದರಾಮೇಶ್ವರರು, ಚನ್ನಬಸವಣ್ಣ, ಮಡಿವಾಳ ಮಾಚಿದೇವರು, ಹಡಪದ ಅಪ್ಪಣ್ಣ ಇತರ ಶರಣರ ತತ್ವಗಳ ಕುರಿತು ಕವನಗಳನ್ನು ಆಹ್ವಾನಿಸಲಾಗಿದೆ.

ಕವನ 30 ಸಾಲುಗಳಿಗೆ ಮಿಕ್ಕದಂತೆ ಕಾಗದದ ಒಂದೇ ಮಗ್ಗುಲಲ್ಲಿ ಬರೆದು ಅಥವಾ ಡಿಟಿಪಿ ಮಾಡಿಸಿ ಸ್ವವಿಳಾಸ, ಕಿರುಪರಿಚಯ, ಭಾವಚಿತ್ರ, ವಾಟ್ಸಪ್ ಮೊಬೈಲ್ ಸಂಖ್ಯೆಯೊಂದಿಗೆ ಏಪ್ರಿಲ್ 15ರ ಒಳಗಾಗಿ ಶ್ರೀ ಮೋಹನ ಬಸನಗೌಡ ಪಾಟೀಲ, ಕಾರ್ಯಕಾರಿ ಸಮಿತಿ ಸದಸ್ಯರು, ಕೇಂದ್ರ ಬಸವ ಸಮಿತಿ,”ಬಸವ ನಿವಾಸ”, ಚನ್ನಮ್ಮನಗರ ಮೊದಲನೆಯ ಅಡ್ಡರಸ್ತೆ, ಬೈಲಹೊಂಗಲ- 591102, ಬೆಳಗಾವಿ ಜಿಲ್ಲೆ ಈ ವಿಳಾಸಕ್ಕೆ ನೋಂದಾಯಿತ ಅಂಚೆ ಮೂಲಕ ಕಳಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ 9448920888 ಸಂಪರ್ಕಿಸಬೇಕೆಂದು ಕೇಂದ್ರ ಬಸವ ಸಮಿತಿಯ ಅಧ್ಯಕ್ಷರಾದ ಡಾ. ಅರವಿಂದ ಜತ್ತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ_
https://chat.whatsapp.com/GavGlyNxCLf7iBbDBH8P5b

Share This Article
Leave a comment

Leave a Reply

Your email address will not be published. Required fields are marked *