ಬೆಳಗಾವಿ
ಬಸವ ಅಂತಾರಾಷ್ಟ್ರೀಯ ಮ್ಯೂಸಿಯಂಗೆ ಕೃಷ್ಣ ಜಲ ಭಾಗ್ಯ ನಿಗಮ ನಿಯಮಿತದಿಂದ ರೂ. 64.43 ಕೋಟಿ ಬಿಡುಗಡೆ ಮಾಡಲಾಗಿದ್ದು, ಇದುವರೆಗೂ ರೂ. 54.82 ಕೋಟಿ ಬಳಕೆ ಮಾಡಲಾಗಿದೆ ಎಂದು ಕಂದಾಯ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಅವರು ವಿಧಾನ ಪರಿಷತ್‍ನಲ್ಲಿ ಸದಸ್ಯ ನಿರಾಣಿ ಹನುಮಂತ ರುದ್ರಪ್ಪ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.
ಬಸವ ಅಂತಾರಾಷ್ಟ್ರೀಯ ಕೇಂದ್ರದ ಸಿವಿಲ್ ಕಾಮಗಾರಿಯ ಎ, ಬಿ, ಸಿ ಮತ್ತು ಎಫ್ ಬ್ಲಾಕ್‍ಗಳ ಕಾಮಗಾರಿ ಮುಕ್ತಾಯವಾಗಿದ್ದು, ಬಾಕಿ ಉಳಿದ ಡಿ ಮತ್ತು ಇ ಬ್ಲಾಕ್‍ಗಳ ಕಾಮಗಾರಿಗಳ ಆಡಳಿತಾತ್ಮಕ ಅನುಮೋದನೆ ನೀಡುವ ಪ್ರಸ್ತಾವನೆ ಪರಿಶೀಲನೆಯಲ್ಲಿರುತ್ತದೆ.
