ಮುಂಬೈನಲ್ಲಿ ಬಸವ ಪುತ್ಥಳಿ ಸ್ಥಾಪಿಸಲು ಈಶ್ವರ ಖಂಡ್ರೆ ಮನವಿ

ಬಸವ ಮೀಡಿಯಾ
ಬಸವ ಮೀಡಿಯಾ

ಸಕಾರಾತ್ಮಕವಾಗಿ ಸ್ಪಂದಿಸಿದ ಮಹಾರಾಷ್ಟ್ರ ಸ್ಪೀಕರ್

ಮುಂಬೈ

ವಿಶ್ವಗುರು ಬಸವಣ್ಣನವರ ಪುತ್ಥಳಿಯನ್ನು ಮುಂಬೈನಲ್ಲಿ ಸ್ಥಾಪಿಸುವಂತೆ ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಬಿ ಖಂಡ್ರೆ ಮನವಿ ಮಾಡಿದ್ದಾರೆ.

ಮುಂಬೈನ ನಾರಿಮನ್ ಪಾಯಿಂಟ್‍ನಲ್ಲಿರುವ ಯಶವಂತರಾವ್ ಚವ್ಹಾಣ ಸೆಂಟರ್‌ನಲ್ಲಿ ರವಿವಾರ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.

ಕಾಯಕವೇ ಕೈಲಾಸ ಎಂದು ಸಾರಿದ ಮತ್ತು ಶ್ರೇಣಿರಹಿತ, ವರ್ಗರಹಿತ, ಜಾತಿ ರಹಿತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದ ಬಸವಣ್ಣನವರ ಪುತ್ಥಳಿಯನ್ನು ಮುಂಬೈನಲ್ಲಿ ಸ್ಥಾಪಿಸುವಂತೆ ಮಹಾರಾಷ್ಟ್ರ ಸರ್ಕಾರವನ್ನು ಕೋರಿದರು.

ಮಹಾಸಭಾ ಲಿಂಗಾಯತರು ಮತ್ತು ವೀರಶೈವರನ್ನು ಒಗ್ಗೂಡಿಸುವ ಕಾರ್ಯ ಮಾಡುತ್ತಿದೆ. ಕೆಲವು ಶಕ್ತಿಗಳು ವೀರಶೈವ ಬೇರೆ, ಲಿಂಗಾಯತ ಬೇರೆ ಎಂದು ಹೇಳುತ್ತಿದ್ದಾರೆ. ಆದರೆ ಯಾವುದೇ ಶಕ್ತಿ, ವ್ಯಕ್ತಿಯಿಂದಲೂ ನಮ್ಮ ಸಮಾಜ ಒಡೆಯಲು ಸಾಧ್ಯವಿಲ್ಲ ಎಂದು ಈಶ್ವರ ಖಂಡ್ರೆ ಸ್ಪಷ್ಟಪಡಿಸಿದರು.

ಮಹಾರಾಷ್ಟ್ರ ಸ್ಪೀಕರ್ ಸಕಾರಾತ್ಮಕ ಸ್ಪಂದನೆ

ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ವಿಧಾನಸಭಾಧ್ಯಕ್ಷ ರಾಹುಲ್ ನಾರ್ವೇಕರ್ ಮಾತನಾಡಿ, ಈಶ್ವರ ಖಂಡ್ರೆ ಅವರ ಮನವಿಯ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕ್ರಮ ವಹಿಸುವ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಸುಶೀಲ್ ಕುಮಾರ್ ಶಿಂಧೆ, ಕರ್ನಾಟಕ ಮಾಜಿ ಮುಖ್ಯಮಂತ್ರಿಗಳು, ಮಹಾರಾಷ್ಟ್ರ ಸರ್ಕಾರ, ಸಂಸತ್ ಸದಸ್ಯ ಜಗದೀಶ ಶೆಟ್ಟರ್, ಮಾಜಿ ಶಾಸಕ ಅಶೋಕ್ ಖೇಣಿ, ಬಸವ ಸಮಿತಿಯ ಅರವಿಂದ ಜತ್ತಿ, ಸಭಾದ ರಾಜ್ಯಾಧ್ಯಕ್ಷ ಶಂಕರ ಬಿದರಿ, ಪದ್ಮ ಪ್ರಶಸ್ತಿ ಪುರಸ್ಕೃತ ಪ್ರಭಾಕರ ಕೋರೆ, ಶಾಸಕರುಗಳಾದ ಕಲ್ಬುರ್ಗಿ ಮಾಜಿ ಮೇಯರ್ ಶರಣು ಮೋದಿ, ಕಾಶಿ ಪೀಠದ ಜಗದ್ಗುರು ಡಾ. ಚಂದ್ರಶೇಖರ್ ಶಿವಾಚಾರ್ಯ ಮಹಾ ಸ್ವಾಮೀಜಿ ಮೊದಲಾದವರು ಪಾಲ್ಗೊಂಡಿದ್ದರು.

ಪ್ರಶಸ್ತಿ ಪ್ರದಾನ

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಲವು ಸಾಧಕರಿಗೂ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.

ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿ ದಾಕ್ಷಾಯಣಿ ಎಸ್‌. ಅಪ್ಪ ಅವರಿಗೆ ‘ಅಕ್ಕಮಹಾದೇವಿ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಬೆಂಗಳೂರಿನ ಬಸವ ಸಮಿತಿಯ ಅಧ್ಯಕ್ಷ ಅರವಿಂದ ಜತ್ತಿ ಅವರಿಗೆ ‘ಬಸವ ರತ್ನ’ ಪ್ರಶಸ್ತಿ, ಕೆಎಲ್‍ಇ ಸಂಸ್ಥೆಯ ಗೌರವ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಅವರಿಗೆ ‘ವೀರಶೈವ ರತ್ನ’ ಪ್ರಶಸ್ತಿ, ಸಂಸದ ಜಗದೀಶ ಶೆಟ್ಟರ್‌ ಅವರಿಗೆ ‘ವೀರಶೈವ ಭೂಷಣ’ ಪ್ರಶಸ್ತಿ, ಮಾಜಿ ಶಾಸಕ ಅಶೋಕ್ ಖೇಣಿ ಅವರಿಗೆ ‘ಪಂಚಾಚಾರ್ಯ ರತ್ನ’ ಪ್ರಶಸ್ತಿ ಹಾಗೂ ಪಂಢರಪುರ ದೇವಸ್ಥಾನದ ಅಧ್ಯಕ್ಷ ಗಹಿನಿನಾಥ ಮಹಾರಾಜ್ ಔಸೆಕರ್ ಅವರಿಗೆ ‘ವಿಠ್ಠಲ ಸೇವಾ ಪುರಸ್ಕಾರ’ ನೀಡಿ ಗೌರವಿಸಲಾಯಿತು.

ಕಾಶಿ ಪೀಠದ ಜಗದ್ಗುರು ಚಂದ್ರಶೇಖರ ಶಿವಾಚಾರ್ಯರು ಸಮಾರಂಭದ ಸಾನ್ನಿಧ್ಯ ವಹಿಸಿದ್ದರು.

ಮಹಾರಾಷ್ಟ್ರ ವಿಧಾನಸಭಾಧ್ಯಕ್ಷ ರಾಹುಲ್ ನಾರ್ವೇಕರ್, ಕೇಂದ್ರದ ಮಾಜಿ ಸಚಿವ ಸುಶೀಲಕುಮಾರ್ ಶಿಂದೆ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಮಹಿಳಾ ಸಮಿತಿಯ ಉಮಾ ಬಿ. ನಾಯಕ್, ವೀಣಾ ಕಾಶಪ್ಪನವರ, ಮಹಾಸಭಾದ ಮಹಾರಾಷ್ಟ್ರ ಘಟಕದ ಅಧ್ಯಕ್ಷ ವಿಶ್ವನಾಥ ಬಿ. ಚಕೋಟೆ, ಶಾಸಕರಾದ ಬಿ.ಆರ್. ಪಾಟೀಲ, ಎಂ.ವೈ. ಪಾಟೀಲ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಮಹಾಸಭಾದ ಕಲಬುರಗಿ ಜಿಲ್ಲಾಧ್ಯಕ್ಷ ಶರಣು ಮೋದಿ, ಶರಣಬಸವ ವಿವಿ ಕುಲಸಚಿವೆ ಲಕ್ಷ್ಮೀ ಪಾಟೀಲ ಮಾಕಾ, ಕಿರಣ ಮಾಕಾ ಪಾಲ್ಗೊಂಡಿದ್ದರು.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/JtGWW38lyFrDf4kKL0aXGH

Share This Article
Leave a comment

Leave a Reply

Your email address will not be published. Required fields are marked *