ಉಡುಪಿ
ಲಿಂಗಾಯತ ಮತಗಳನ್ನು ಬಳಸಿಕೊಂಡು ಗೆಲ್ಲುವ ಲಿಂಗಾಯತ ರಾಜಕಾರಣಿಗಳು ಲಿಂಗಾಯತರ ವಿರುದ್ಧವೇ ಕೆಲಸ ಮಾಡುತ್ತಾರೆ.
ಇಂದು ನಾಡಿನುದ್ದಕ್ಕೂ ಸಕ್ರಿಯವಾಗಿರುವ ಬಸವ ಸಂಘಟನೆಗಳು ರಾಜಕೀಯ ಪ್ರಜ್ಞೆ ಬೆಳಸಿಕೊಂಡರೆ ಮಾತ್ರ ಲಿಂಗಾಯತ ವಿರೋಧಿ ರಾಜಕಾರಣಕ್ಕೆ ಕಡಿವಾಣ ಹಾಕಲು ಸಾಧ್ಯ.
ಈ ಸಾಧ್ಯತೆಯ ಬಗ್ಗೆ ಬಸವ ಸಂಘಟನೆಗಳಲ್ಲಿ ಜಾಗೃತಿ ಮೂಡಿಸಲು ‘ಬಸವ ಶಕ್ತಿ’ ಸಮಾವೇಶ ನಡೆಸಬೇಕೆಂಬ ಸಲಹೆ ಅನೇಕ ಬಸವ ಕಾರ್ಯಕರ್ತರಿಂದ ಬಂದಿದೆ.
ಇಂದು ‘ಬಸವ ಶಕ್ತಿ’ ಸಮಾವೇಶದ ಬಗ್ಗೆ ಮಂಗಳೂರು ವಿಶ್ವವಿದ್ಯಾಲಯ ನಿವೃತ ಪ್ರಾಧ್ಯಾಪಕ ಪ್ರೊ. ಆರ್. ಶಂಕರ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
1) ಬಸವ ಸಂಘಟನೆಗಳು ರಾಜಕೀಯ ಪ್ರಭಾವ ಬೆಳೆಸಿಕೊಳ್ಳಬೇಕೆ? ಯಾಕೆ?
ಹೌದು. ಖಂಡಿತವಾಗಿಯೂ ಬೆಳೆಸಿಕೊಳ್ಳಬೇಕು. ಏಕೆಂದರೆ ನಾವು ನಮ್ಮಷ್ಟಕ್ಕೆ ಇದ್ದರೆ ಸಾಲದು, ನಮ್ಮ ಸುತ್ತಮುತ್ತ ಏನಾಗುತ್ತಿದೆ ಎಂಬ ಅರಿವು ಇರುವುದು ಬಹಳ ಮುಖ್ಯ.
2) ಇದಕ್ಕೆ ತರಬೇತಿಯ ಅಗತ್ಯವಿದೆಯೇ?
ತರಬೇತಿಯ ಅಗತ್ಯ ಖಂಡಿತವಾಗಿಯೂ ಇದೆ.
3) ಬಸವ ಶಕ್ತಿ ಸಮಾವೇಶದ ರೂಪುರೇಷೆಯ ಬಗ್ಗೆ ನಿಮ್ಮ ಸಲಹೆ?
ಸರಳವಾಗಿ ಲಿಂಗಾಯತ ಧರ್ಮ ಎಂದರೆ ಏನು, ಅದು ವೀರಶೈವ ಮತ್ತು ಹಿಂದೂ ಧರ್ಮಗಳಿಗಿಂತ ಯಾವ ರೀತಿ ಭಿನ್ನವಾಗಿದೆ, ಎಂಬುದನ್ನು ವಿವರಿಸಿ ಹೇಳುವುದು. ಮತ್ತು ಇದರ ಬಗ್ಗೆ ಪ್ರಶ್ನೋತ್ತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದು. ಇದನ್ನು ಭಾಷಣಗಳ ಮೂಲಕ, ಟಿವಿ ಮಾಧ್ಯಮದ ಮೂಲಕ, ಸೋಶಿಯಲ್ ಮೀಡಿಯ ಮತ್ತು ದಿನಪತ್ರಿಕೆಗಳ ಮೂಲಕ ಮಾಡಬಹುದು.
4) ನಿಮ್ಮ ಸಂಘಟನೆಯಿಂದ ಎಷ್ಟು ಜನ ಭಾಗವಹಿಸುತ್ತೀರಾ?
ನನ್ನದು ಏಕ ವ್ಯಕ್ತಿ ಸಂಘಟನೆ! 100% ಭಾಗವಹಿಸುವ ಆಸೆ, ಆಸಕ್ತಿ ಇದೆ.
5) ಸಮಾವೇಶ ಸಂಘಟಿಸಲು ನೆರವಾಗಲು ನಿಮಗೆ ಆಸಕ್ತಿಯಿದೆಯೇ?
ಈ ಸಂಬಂಧವಾಗಿ ಸಮಯ ಮತ್ತು ಧನ ಸಹಾಯಗಳ ಮೂಲಕ.
