ಬಸವತತ್ವ ಬೆಳೆಸಿಕೊಂಡು ಲಿಂಗಾಯತರು ಸಂಘಟಿತರಾಗಲಿ: ಸೋಮಣ್ಣ

ಬಸವ ಮೀಡಿಯಾ
ಬಸವ ಮೀಡಿಯಾ

ಕುಣಿಗಲ್ಲ:

‘ಬಸವಣ್ಣನ ತತ್ವಗಳು ಎಂದೆಂದಿಗೂ ದೇಶದ ಸಾಮಾಜಿಕ ಪರಿವರ್ತನೆಗೆ ಮಾರ್ಗಸೂಚಿಯಾಗಿವೆ. ಅವನ್ನು ಅಳವಡಿಸಿಕೊಂಡು ಸರ್ವಸಮಾಜದೊಂದಿಗೆ ವೀರಶೈವ ಲಿಂಗಾಯತರು ಬೆರೆತು ಸಂಘಟಿತರಾಗಬೇಕು ಮತ್ತು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕು’ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದರು.

ತಾಲ್ಲೂಕು ವೀರಶೈವ ಲಿಂಗಾಯತ ಸಮಾಜ, ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘ, ಸೌಹಾರ್ದ ಪತ್ತಿನ ಸಹಕಾರ ಸಂಘ ಮತ್ತು ವೀರಶೈವ ಲಿಂಗಾಯತ ಸಂಘ ಸಂಸ್ಥೆಗಳ ವತಿಯಿಂದ ಇತ್ತೀಚಿಗೆ ಬಸವ ಜಯಂತಿ ಸಮಾರಂಭ ನಡೆಯಿತು.

ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಬಸವ ಮತ್ತಿತ್ತರ ಸ್ತಬ್ಧಚಿತ್ರಗಳ ಮೆರವಣಿಗೆಗೆ ಚಾಲನೆ ನೀಡಿ ಸೋಮಣ್ಣ ಅವರು ಮಾತನಾಡಿದರು.

ತುಮುಲ್ ನಿರ್ದೇಶಕ ಡಿ. ಕೃಷ್ಣಕುಮಾರ, ಮುಖಂಡರಾದ ಬಲರಾಂ, ಪುರಸಭೆ ಮಾಜಿ ಅಧ್ಯಕ್ಷ ರಂಗಸ್ವಾಮಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಬೆಟ್ಟಹಳ್ಳಿ ಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ‘ವೀರಶೈವ ಲಿಂಗಾಯತರು ಸಂಘಟನೆ ಶಕ್ತಿಯನ್ನು ಹೆಚ್ಚಿಸಿಕೊಂಡು, ಮಕ್ಕಳಲ್ಲಿ ಬಸವ ಚಿಂತನೆಗಳನ್ನು ಅಳವಡಿಸಿ, ಮೊಳಗಿಸುವ ವ್ಯವಸ್ಥೆ ರೂಪಿಸಬೇಕು’ ಎಂದರು.

ನೆಲಮಂಗಲ ಪವಾಡ ಬಸವಣ್ಣ ದೇವರ ಮಠದ ಪೂಜ್ಯ ಸಿದ್ದಲಿಂಗ ಸ್ವಾಮೀಜಿ, ಶಾಸಕ ಎಚ್.ಡಿ. ರಂಗನಾಥ ಮಾತನಾಡಿದರು.

ಹುಲಿಯೂರುದುರ್ಗ ಭದ್ರಗಿರಿ ಮಠದ ವೀರಭದ್ರ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಪಟ್ಟಣದ ಹಿರೇಮಠದ ವೀರರುದ್ರ ಶಿವಾಚಾರ್ಯ ಸ್ವಾಮೀಜಿ, ಸಂಸದ ಡಾ. ಸಿ.ಎನ್. ಮಂಜುನಾಥ, ಸಮಾಜದ ಅಧ್ಯಕ್ಷ ಎನ್‌.ಎಸ್. ವಸಂತಕುಮಾ‌ರ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್. ಸಿದ್ದಲಿಂಗಪ್ಪ, ಮಾಜಿ ಸಚಿವ ಡಿ. ನಾಗರಾಜಯ್ಯ, ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಬಸವರಾಜಪ್ಪ, ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಷಡಕ್ಷರಿ, ತಾಲ್ಲೂಕು ಅಧ್ಯಕ್ಷ ಶಿವನಂಜಯ್ಯ, ಕಾರ್ಯದರ್ಶಿ ಲೋಕೇಶ, ಸಹಕಾರ ಸಂಘದ ಅಧ್ಯಕ್ಷ ಚೇತನ್‌, ಸಾರ್ವಜನಿಕ ಶಿಕ್ಷಣ ಇಲಾಖೆ ಡಯಟ್ ಉಪನಿರ್ದೇಶಕ ಎಸ್.ಸಿ. ಮಂಜುನಾಥ ಮತ್ತಿತರರು ಉಪಸ್ಥಿತರಿದ್ದರು.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/HyjxiPYAeioCDGVqP9ADsE

Share This Article
Leave a comment

Leave a Reply

Your email address will not be published. Required fields are marked *