ಮಂಜು ಕಲಾಲ
ವಿಶ್ವಗುರು ಬಸವೇಶ್ವರರ ಕಾರ್ಯಕ್ಷೇತ್ರ ಬಸವಕಲ್ಯಾಣ ಅನುಭವ ಮಂಟಪಕ್ಕೆ ಅನುದಾನ ನೀಡಿದಂತೆ ಬಸವ ಜನ್ಮಸ್ಥಳ ಬಸವನಬಾಗೇವಾಡಿಯ ಅಭಿವೃದ್ಧಿಗಾಗಿ ಕೇಂದ್ರದಿಂದ ಅನುದಾನ ನೀಡುವಂತೆ ಸಂಸತ್ತಿನಲ್ಲಿ ಧ್ವನಿ ಎತ್ತುವೆ ಎಂದು ಬೀದರ ಸಂಸದ ಸಾಗರ ಖಂಡ್ರೆ ಹೇಳಿದರು.
ಪಟ್ಟಣಕ್ಕೆ ಶುಕ್ರವಾರ ಪ್ರಥಮ ಬಾರಿಗೆ ಆಗಮಿಸಿದ ಅವರು ಮೂಲನಂದೀಶ್ವರ (ಬಸವೇಶ್ವರ) ದೇವಸ್ಥಾನ, ಬಸವಜನ್ಮ ಸ್ಮಾರಕಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕ್ಷೇತ್ರದ ಶಾಸಕ, ಸಚಿವ ಶಿವಾನಂದ ಪಾಟೀಲ ಅವರೊಂದಿಗೆ ಸಮಾಲೋಚನೆ ಮಾಡಿ ಇಲ್ಲಿ ಕೈಗೊಳ್ಳಬೇಕಾದ ಕಾರ್ಯಗಳಿಗೆ ಬೇಕಾದ ಅನುದಾನ ಕುರಿತು ಚರ್ಚಿಸಿ ಸಂಸತ್ತಿನಲ್ಲಿ ಇದರ ಬಗ್ಗೆ ಧ್ವನಿ ಎತ್ತುವೆ. ಈ ಭಾಗದ ಅಭಿವೃದ್ಧಿಗೆ ಕೇಂದ್ರದಿಂದ ಅನುದಾನ ಸಿಗುವಂತೆ ಪ್ರಾಮಾಣಿಕವಾಗಿ ಪ್ರಯತ್ನಿಸುವೆ.

ತೆಲಗಿಯ ಬಸವನಬಾಗೇವಾಡಿ ರೋಡ್ ರೈಲು ನಿಲ್ದಾಣದಲ್ಲಿ ಎಲ್ಲ ರೈಲು ನಿಲುಗಡೆಯಾಗುವಂತೆ ಕೇಂದ್ರ ರೈಲ್ವೆ ಸಚಿವರ ಗಮನಕ್ಕೆ ತಂದು ಇದರ ಬಗ್ಗೆ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿಕೊಳ್ಳಲಾಗುವುದು ಎಂದರು.
ಈ ಸಂದರ್ಭದಲ್ಲಿ ನಂದಿ ಸಕ್ಕರೆ ಕಾರ್ಖಾನೆಯ ನಿರ್ದೇಶಕ ಸತ್ಯಜೀತ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ, ಪ್ರಧಾನ ಕಾರ್ಯದರ್ಶಿ ರವಿ ರಾಠೋಡ, ರಾಷ್ಟ್ರೀಯ ಬಸವಸೈನ್ಯ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ, ಎಪಿಎಂಸಿ ಮಾಜಿ ಅಧ್ಯಕ್ಷ ಶೇಖರ ಗೊಳಸಂಗಿ, ಬಸವರಾಜ ಹಾರಿವಾಳ, ಬಸವರಾಜ ರಾಯಗೊಂಡ, ಸಂಗಮೇಶ ಓಲೇಕಾರ, ಜಟ್ಟಿಂಗರಾಯ ಮಾಲಗಾರ, ಪಿಂಟುಗೌಡ ಪಾಟೀಲ, ಮಹಾಂತೇಶ ಸಾಸಾಬಾಳ, ಪ್ರವೀಣ ಪೂಜಾರಿ, ಪುಟ್ಟುಗೌಡ ಪಾಟೀಲ, ಬಸವರಾಜ ನಾಯ್ಕೋಡಿ, ಮುತ್ತು ಡಂಬಳ, ಶಿವನಗೌಡ ಪಾಟೀಲ, ಎಂ.ಬಿ.ತೋಟದ ಇತರರು ಇದ್ದರು.