ನಂಜನಗೂಡು
ಭಾಲ್ಕಿ ತಾಲೂಕಿನಲ್ಲಿ ಬಸವೇಶ್ವರ ಪ್ರತಿಮೆಯನ್ನು ವಿರೂಪಗೊಳಿಸಿರುವುದನ್ನು ಖಂಡಿಸಿ ಗುರುವಾರ ಬೆಳಿಗ್ಗೆ 10.30 ಗಂಟೆಗೆ ಪಟ್ಟಣದಲ್ಲಿ ಪ್ರತಿಭಟನೆ ನಡೆಯಲಿದೆ.
ಪ್ರತಿಭಟನೆ ತಾಲೂಕು ಆಡಳಿತ ಕಚೇರಿಯ ಮುಂಭಾಗ ನಡೆಯಲಿದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಪದಾಧಿಕಾರಿಗಳು ತಿಳಿಸಿದ್ದಾರೆ. ಮಹಾಸಭಾದ ಸದಸ್ಯರು ಮತ್ತು ಬಸವಾಭಿಮಾನಿಗಳು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕೆಂದು ಕೋರಿಕೊಳ್ಳಲಾಗಿದೆ.