ಸಂಘಪರಿವಾರದ ಉತ್ಸವಕ್ಕೆ ಅನುಮತಿಯಿಲ್ಲದೆ ಹೆಸರ ಬಳಕೆ: ಪ್ರಿಯಾಂಕ್ ಖರ್ಗೆ

ಬಸವ ಮೀಡಿಯಾ
ಬಸವ ಮೀಡಿಯಾ

ಬೆಂಗಳೂರು

ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಂತರ ಸಚಿವ ಪ್ರಿಯಾಂಕ್ ಖರ್ಗೆ ಭಾರತೀಯ ಸಂಸ್ಕೃತಿ ಉತ್ಸವದಿಂದ ದೂರವಿರಲು ನಿರ್ಧರಿಸಿ, ತಮ್ಮ ಒಪ್ಪಿಗೆಯಿಲ್ಲದೆ ಆಮಂತ್ರಣ ಪತ್ರಿಕೆಯಲ್ಲಿ ತಮ್ಮ ಹೆಸರನ್ನು ಬಳಸಲಾಗಿದೆ ಎಂದು ಹೇಳಿದ್ದಾರೆ.

ಸಂಘ ಪರಿವಾರದ ಕೆ.ಎನ್ ಗೋವಿಂದಾಚಾರ್ಯ ಅವರು ಸ್ಥಾಪಿಸಿರುವ ಭಾರತ ವಿಕಾಸ ಸಂಗಮ ಕಾರ್ಯಕ್ರಮವನ್ನು ಆಯೋಜಿಸಿದೆ. ಆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ ಜೊತೆಗೆ ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ ಎಂಬ ಮಾಹಿತಿಯೊಂದಿಗೆ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಭಾರತ ವಿಕಾಸ ಸಂಗಮ ಸಂಸ್ಥೆ ಆಯೋಜಿಸಿರುವ ಭಾರತೀಯ ಸಂಸ್ಕೃತಿ ಉತ್ಸವ ಎಂಬ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಮುದ್ರಣವಾಗಿರುವುದನ್ನು ಮಾಧ್ಯಮಗಳ ಮೂಲಕ ಗಮನಿಸಿದೆ. ಆದರೆ ನನಗೆ ಈ ಕಾರ್ಯಕ್ರಮದ ಬಗ್ಗೆ ಮಾಹಿತಿ ಇಲ್ಲ, ನನಗೆ ಆಹ್ವಾನವೂ ಬಂದಿಲ್ಲ ಎಂದು ಹೇಳಿದ್ದಾರೆ.

ನನಗೆ ಆಹ್ವಾನ ನೀಡದೆಯೇ ನನ್ನ ಹೆಸರನ್ನು ಆಹ್ವಾನ ಪತ್ರಿಕೆಯಲ್ಲಿ ಮುದ್ರಿಸಿ ಹಂಚುವುದು ಸಮಂಜಸವಲ್ಲ ಎಂದೂ ಅವರು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

Share This Article
Leave a comment

Leave a Reply

Your email address will not be published. Required fields are marked *