ಬೀದರ
ಪೂಜ್ಯ ಡಾ. ಚನ್ನಬಸವಾನಂದ ಸ್ವಾಮೀಜಿ ಮಾತನಾಡಿ ಲಿಂಗಾಯತ ಧರ್ಮದ ಸ್ವತಂತ್ರ ಧರ್ಮದ ಮಾನ್ಯತೆಗಾಗಿ ತಮ್ಮ ಆರೋಗ್ಯವನ್ನೂ ಲೆಕ್ಕಿಸದೆ ಪೂಜ್ಯ ಮಾತೆ ಮಹಾದೇವಿಯವರು ಹೋರಾಟ ಮಾಡಿದ್ದರು. ಹೀಗಾಗಿ ಮಾನ್ಯತೆ ಪಡೆಯುವುದು ಮಾತಾಜಿಯವರ ದೊಡ್ಡ ಕನಸಾಗಿತ್ತು.
ಹೀಗಾಗಿ ಶಾಸಕ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಸೇರಿದಂತೆ ಇನ್ನಿತರ ಲಿಂಗಾಯತ ಶಾಸಕರು ವಿಧಾನಸೌಧದಲ್ಲಿ ಸ್ವತಂತ್ರ ಧರ್ಮದ ಮಾನ್ಯತೆಗಾಗಿ ಧ್ವನಿ ಎತ್ತಬೇಕೆಂದು ತಿಳಿಸಿದರು.
ನಗರದ ಸ್ವಾಮಿ ಸಮರ್ಥ ಕಲ್ಯಾಣ ಮಂಟಪದಲ್ಲಿ ರಾಷ್ಟ್ರೀಯ ಬಸವ ದಳ, ಲಿಂಗಾಯತ ಧರ್ಮ ಮಹಾಸಭಾ ಹಾಗೂ ಕ್ರಾಂತಿ ಗಂಗೋತ್ರಿ ಅಕ್ಕನಾಗಲಾಂಬಿಕಾ ಮಹಿಳಾ ಗಣದ ವತಿಯಿಂದ ಜರುಗಿದ ಲಿಂಗಾಯತ ಧರ್ಮದ ಮಹಾದಂಡನಾಯಕರ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.