ಬೆಂಗಳೂರು
ಗುರುವಾರ ಬೆಳಗಾವಿಯ ಸುರ್ವಣಸೌಧದಲ್ಲಿ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಸಚಿವೆ ಲಕ್ಷ್ಮಿ ಹೆಬ್ಬಾಳಕರವರಿಗೆ ಅವಾಚ್ಯ ಪದ ಬಳಸಿರುವುದರನ್ನು ಅಖಿಲ ಭಾರತ ವೀರಶೈವ ಮಹಾಸಭೆ ಖಂಡಿಸಿದೆ.
ಸಿ.ಟಿ.ರವಿ ಅವರ ವಿರುದ್ಧ ಅಗತ್ಯ ಕಾನೂನು ಕ್ರಮಕೈಗೊಳ್ಳುವಂತೆ ಮಹಾಸಭೆ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಮಾಧ್ಯಮಗಳಿಗೆ ಕಳಿಸಿರುವ ಪ್ರಕಟಣೆಯಲ್ಲಿ ನಮ್ಮ ದೇಶದಲ್ಲಿ ಹೆಣ್ಣುಮಕ್ಕಳಿಗೆ ವಿಶೇಷ ಸ್ಥಾನಮಾನ ಮತ್ತು ಗೌರವ ನೀಡಲಾಗಿದೆ. ನಾಲಿಗೆ ನಾಗರೀಕತೆ ಹೇಳುತ್ತದೆ. ಜನಪ್ರತಿನಿಧಿಗಳು ಸದನದ ಗೌರವ, ಘನತೆ ಕಾಪಾಡಬೇಕು. ಸದನದ ಒಳಗೆ ಹಾಗೂ ಹೊರಗೆ ಜನಪ್ರತಿನಿಧಿಗಳ ನಡವಳಿಕೆಗಳು ಇತರರಿಗೆ ಮಾದರಿಯಾಗಿರಬೇಕು. ಅಸಾಂವಿಧಾನಿಕ ಪದಬಳಕೆ ಸದನದ ಇತಿಹಾಸಕ್ಕೆ ಕಪ್ಪುಚುಕ್ಕೆ, ಎಂದು ಹೇಳಿದ್ದಾರೆ.