ಲಿಂಗಾಯತ ವಿಧಿ ವಿಧಾನದಂತೆ ಚಿದಾನಂದ ಸ್ವಾಮೀಜಿ ಅಂತ್ಯಕ್ರಿಯೆ

ಬಸವ ಮೀಡಿಯಾ
ಬಸವ ಮೀಡಿಯಾ

ಮೈಸೂರು

ಸಾವಿರಾರು ಭಕ್ತರ ಮಧ್ಯೆ ಮಧ್ಯಾಹ್ನ 3.30 ಗಂಟೆಗೆ ಮಠದ ಆವರಣದಲ್ಲಿ ಅಂತಿಮ ವಿಧಿವಿಧಾನಗಳ ಮುಖಾಂತರ ಲಿಂಗೈಕ್ಯ ಪೂಜ್ಯ ಚಿದಾನಂದ ಸ್ವಾಮೀಜಿ ಅವರ ಅಂತ್ಯಕ್ರಿಯೆ ನಡೆಸಲಾಯಿತು.

ಚಿದಾನಂದ ಸ್ವಾಮೀಜಿ ಅವರ ಪಾರ್ಥಿವ ಶರೀರದ ಮೆರವಣಿಗೆ ಶುಕ್ರವಾರ ಮುಂಜಾನೆ 10.30ಕ್ಕೆ ಮಠದ ಆವರಣದಿಂದ ಹೊರಟು, ಅಗ್ರಹಾರ, ಬಸವೇಶ್ವರ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳ ಮುಖಾಂತರ ಸಾಗಿ ಹೊಸಮಠ ತಲುಪಿತು.

ಅಂತ್ಯಕ್ರಿಯೆ ನೇತೃತ್ವವನ್ನು ಸುತ್ತೂರು ದೇಶಿಕೇಂದ್ರ ಸ್ವಾಮೀಜಿ, ತುಮಕೂರು ಸಿದ್ಧಲಿಂಗ ಸ್ವಾಮೀಜಿ ವಹಿಸಿದ್ದರು.

ಮೈಸೂರು, ಚಾಮರಾಜನಗರ ಜಿಲ್ಲೆಗಳ ಬಹುತೇಕ ಮಠಾಧೀಶರು, ಜನಪ್ರತಿನಿಧಿಗಳು, ರಾಜಕೀಯ ಮುಖಂಡರು, ಲಿಂಗಾಯತ, ಬಸವಪರ ಸಂಘ ಸಂಸ್ಥೆಗಳ ಪ್ರಮುಖರು ಹಾಜರಿದ್ದರು.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/LcykjUHphtT2VDkfrKC3PM

Share This Article
Leave a comment

Leave a Reply

Your email address will not be published. Required fields are marked *