ಆರ್.ಕೆ. ಹುಡಗಿ, ರಂಜಾನ್‌ ದರ್ಗಾಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಬಸವ ಮೀಡಿಯಾ
ಬಸವ ಮೀಡಿಯಾ

ಬೆಂಗಳೂರು

ಕರ್ನಾಟಕ ಸಾಹಿತ್ಯ ಅಕಾಡೆಮಿಯ 2022ರ ‘ವಾರ್ಷಿಕ ಗೌರವ ಪ್ರಶಸ್ತಿ’ಗೆ ಸಾಹಿತಿಗಳಾದ ಆರ್.ಕೆ. ಹುಡಗಿ, ಅಗ್ರಹಾರ ಕೃಷ್ಣಮೂರ್ತಿ, ಇಂದಿರಾ ಹೆಗ್ಗಡೆ, ರಂಜಾನ್‌ ದರ್ಗಾ ಹಾಗೂ ತುಂಬಾಡಿ ರಾಮಯ್ಯ ಆಯ್ಕೆಯಾಗಿದ್ದಾರೆ.

‘ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಅಮೂಲ್ಯವಾದ ಸೇವೆಯನ್ನು ಪರಿಗಣಿಸಿ ಐವರನ್ನು ಗೌರವ ಪ್ರಶಸ್ತಿಗೆ ಸರ್ವ ಸದಸ್ಯರ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು ತಲಾ ₹50 ಸಾವಿರ ನಗದು ಬಹುಮಾನ ಒಳಗೊಂಡಿದೆ. ಈ ಬಾರಿ ಪ್ರಶಸ್ತಿಗಳಿಗೆ ವಿಭಾಗವಾರು ಸಾಹಿತಿಗಳನ್ನು ಗುರುತಿಸಿ, ಆಯ್ಕೆ ಮಾಡಲಾಗಿದೆ’ ಎಂದು ಅಕಾಡೆಮಿ ಅಧ್ಯಕ್ಷ ಎಲ್.ಎನ್. ಮುಕುಂದರಾಜ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘2022ರ ‘ಸಾಹಿತ್ಯ ಶ್ರೀ’ ಪ್ರಶಸ್ತಿಗೆ ಬಂಜಗೆರೆ ಜಯಪ್ರಕಾಶ್, ರೂಮಿ ಹರೀಶ್, ಎಂ.ಜಿ. ಮಂಜುನಾಥ, ದಾಸನೂರು ಕೂಸಣ್ಣ, ರಾಜಶೇಖರ ಹತಗುಂದಿ, ಎಚ್.ಎನ್.ಆರತಿ, ಸಾರಿಕಾದೇವಿ ಕಾಳಗಿ, ಮಹೇಶ್ ಹರವೆ, ಅನಸೂಯ ಕಾಂಬ್ಳೆ ಹಾಗೂ ಚಲಂ ಹಾಡ್ಲಹಳ್ಳಿ ಅವರನ್ನು ಆಯ್ಕೆ ಮಾಡಲಾಗಿದೆ. ಸಾಹಿತ್ಯ ಕ್ಷೇತ್ರದಿಂದ ಐವರು, ಸೃಜನೇತರ ಸಾಹಿತ್ಯ ಕ್ಷೇತ್ರದಿಂದ ನಾಲ್ವರು ಹಾಗೂ ಸಾಹಿತ್ಯ ಪರಿಚಾರಿಕೆಗೆ ಸಂಬಂಧಿಸಿದಂತೆ ಒಬ್ಬರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು ತಲಾ ₹25 ಸಾವಿರ ಒಳಗೊಂಡಿದೆ’ ಎಂದರು.

2021ರ ಪುಸ್ತಕ ಬಹುಮಾನಕ್ಕೆ ವಿಮರ್ಶಕರ ಅಭಿಪ್ರಾಯ ಆಧರಿಸಿ 17 ಕೃತಿಗಳನ್ನು ಆಯ್ಕೆ ಮಾಡಲಾಗಿದೆ. ಈ ಬಹುಮಾನವು ತಲಾ ₹25 ಸಾವಿರ ನಗದು ಬಹುಮಾನ ಒಳಗೊಂಡಿದೆ. 2021ರ ವಿವಿಧ ದತ್ತಿ ಬಹುಮಾನಗಳಿಗೆ ಎಂಟು ಕೃತಿಗಳು ಆಯ್ಕೆಯಾಗಿವೆ. ಪ್ರಶಸ್ತಿ ಪ್ರದಾನ ಸಮಾರಂಭವು ಡಿಸೆಂಬರ್ ತಿಂಗಳಲ್ಲಿ ನಡೆಯುವ ಸಾಧ್ಯತೆಯಿದ್ದು, ಸ್ಥಳ ನಿಗದಿಯಾಗಿಲ್ಲ ಎಂದು ತಿಳಿಸಿದರು.

Share This Article
Leave a comment

Leave a Reply

Your email address will not be published. Required fields are marked *