ದಾವಣಗೆರೆಯಲ್ಲಿ ಜಿಲ್ಲಾ ನೊಳಂಬ ವೀರಶೈವ ಲಿಂಗಾಯತ ಸಂಘದ ಉದ್ಘಾಟನೆ

ಬಸವ ಮೀಡಿಯಾ
ಬಸವ ಮೀಡಿಯಾ

ದಾವಣಗೆರೆ

ದಾವಣಗೆರೆ ಜಿಲ್ಲಾ ನೊಳಂಬ ವೀರಶೈವ ಲಿಂಗಾಯತ ಸಂಘವನ್ನು ಭಾನುವಾರ ಮಾಜಿ ಸಚಿವ ಜಿ.ಸಿ. ಮಾಧುಸ್ವಾಮಿ ಉದ್ಘಾಟಿಸಿ ಮಾತನಾಡಿದರು.

ಯಾರ ವಿರುದ್ಧವೋ ಹೋರಾಡಲು ಅಥವಾ ಯಾರದ್ದೋ ಸಮಾಜದ ಪರ್ಯಾಯವಾಗಿ ಈ ಸಂಘಟನೆ ಎಂದು ತಿಳಿಯಬಾರದು. ಎಲ್ಲಾ ಸಮಾಜದವರೂ ನಮ್ಮ ಬಂಧುಗಳು. ಎಲ್ಲರನ್ನೂ ಜೊತೆಗೆ ತೆಗೆದುಕೊಂಡು ಹೋಗಬೇಕು ಎಂದು ನಗರದ ಕುವೆಂಪು ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಹೇಳಿದರು.

ಜಿಲ್ಲೆಯಲ್ಲಿ ಸಮಾಜವನ್ನು ಸಂಘಟಿತಗೊಳಿಸಿ, ಹಿಂದುಳಿದವರನ್ನು ಮುಖ್ಯವಾಹಿನಿಗೆ ತರಲು, ಸಮಾಜದ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಸಂಘ ಸ್ಥಾಪಿಸಲಾಗಿದೆ ಎಂದು ಜಿಲ್ಲಾ ನೊಳಂಬ ವೀರಶೈವ ಲಿಂಗಾಯತ ಸಂಘದ ಕಾರ್ಯದರ್ಶಿ ಡಾ. ಇ. ವಿರೂಪಾಕ್ಷಪ್ಪ ಹೇಳಿದರು.

ಹಳೇಬೀಡು ಶ್ರೀ ಪುಷ್ಪಗಿರಿ ಮಹಾ ಸಂಸ್ಥಾನದ ಶ್ರೀ ಸೋಮಶೇಖರ ಶಿವಾಚಾರ್ಯ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

Share This Article
Leave a comment

Leave a Reply

Your email address will not be published. Required fields are marked *