20,000ಕ್ಕೂ ಅಧಿಕ ಭಕ್ತರಿಗೆ ವೀರಶೈವ ಮಹಾಸಭಾ ದಾಸೋಹ, ವಸತಿ ವ್ಯವಸ್ಥೆ ಕಲ್ಪಿಸಲಿದೆ.
ದಾವಣಗೆರೆ
ಪಂಚಾಚಾರ್ಯರ ನೇತೃತ್ವದಲ್ಲಿ ವೀರಶೈವ ಶಿವಾಚಾರ್ಯರ ಎರಡು ದಿನದ ಶೃಂಗಸಭೆ ನಗರದ ಅಭಿನವ ರೇಣುಕ ಮಂದಿರದಲ್ಲಿ ಇಂದಿನಿಂದ ಆರಂಭವಾಗಲಿದೆ. ವೀರಶೈವ ಪಂಚಪೀಠಗಳ ಒಗ್ಗೂಡಿಸುವ ಆಶಯ ಸಮ್ಮೇಳನದ್ದಾಗಿದೆ.
ರಂಭಾಪುರಿ ಪೀಠದ ವೀರಸೋಮೇಶ್ವರ ಸ್ವಾಮೀಜಿ, ಉಜ್ಜಿನಿಯ ಸಿದ್ಧಲಿಂಗ ರಾಜದೇಶಿಕೇಂದ್ರ ಸ್ವಾಮೀಜಿ, ಶ್ರೀಶೈಲ ಮಠದ ಚನ್ನಸಿದ್ಧರಾಮ ಪಂಡಿತಾರಾಧ್ಯ ಸ್ವಾಮೀಜಿ, ಕಾಶಿ ಪೀಠದ ಮಲ್ಲಿಕಾರ್ಜುನ ವಿಶ್ವಾರಾಧ್ಯ ಸ್ವಾಮೀಜಿ ಹಾಗೂ ಕೇದಾರ ಪೀಠದ ಭೀಮಾಶಂಕರ ಲಿಂಗ ಶಿವಾಚಾರ್ಯ ಸ್ವಾಮೀಜಿ 16 ವರ್ಷಗಳ ಬಳಿಕ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.
20,000ಕ್ಕೂ ಅಧಿಕ ಭಕ್ತರು ಹಾಗೂ 500ಕ್ಕೂ ಅಧಿಕ ಮಠಾಧೀಶರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಅಖಿಲ ಭಾರತ ವೀರಶೈವ ಮಹಾಸಭಾ ದಾಸೋಹ, ವಸತಿ ವ್ಯವಸ್ಥೆ ಕಲ್ಪಿಸಲಿದೆ. ಜಾತಿ ಗಣತಿ ಸೇರಿ ಹಲವು ವಿಷಯಗಳನ್ನು ಕುರಿತು ಚರ್ಚೆ ನಡೆಯಲಿದೆ.