ಮಂದಗತಿಯಲ್ಲಿ ಸಾಗುತ್ತಿರುವ ಅನುಭವ ಮಂಟಪ ಕೆಲಸ: ಈಶ್ವರ ಖಂಡ್ರೆ ಎಚ್ಚರಿಕೆ

ಬಸವ ಮೀಡಿಯಾ
ಬಸವ ಮೀಡಿಯಾ

ಬಸವ ಕಲ್ಯಾಣದಲ್ಲಿ ರಾಜ್ಯ ಸರ್ಕಾರ ನಿರ್ಮಿಸುತ್ತಿರುವ ನೂತನ ಅನುಭವ ಮಂಟಪ 2025ರ ಡಿಸೆಂಬರ್ ಒಳಗೆ ಮುಗಿಯಬೇಕಿದೆ, ಆದರೆ ಸದ್ಯದ ವೇಗ ನೋಡಿದರೆ ನಿಗದಿದ ಸಮಯಕ್ಕೆ ಪೂರ್ಣಗೊಳ್ಳುವ ಲಕ್ಷಣ ಕಾಣಿಸುತ್ತಿಲ್ಲ, ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.

ರವಿವಾರ ಸ್ಥಳಕ್ಕೆ ಭೇಟಿ ನೀಡಿ ಕೆಲಸದ ಪ್ರಗತಿ ಪರಿಶೀಲಿಸಿ ಕಾಮಗಾರಿ ವೇಗ ಹೆಚ್ಚಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ವಿಳಂಬವಾದರೆ ಸಂಬಂಧಪಟ್ಟ ಅಧಿಕಾರಿಗಳನ್ನು ಜವಾಬ್ದಾರಿ ಮಾಡುವುದಾಗಿ ಎಚ್ಚರಿಸಿದರು. ಕಾಮಗಾರಿ ಮುಗಿಸಲು ಬೇಕಾಗುವ ಅನುದಾನವನ್ನೂ ಒದಗಿಸಲು ಭರವಸೆ ನೀಡಿದರು.

ಅನುಭವ ಮಂಟಪ ಕಟ್ಟಡದ ಒಳಭಾಗದಲ್ಲಿ 770 ಅಮರಗಣಂಗಳ ಸ್ಮರಣೆಗಾಗಿ ನಿರ್ಮಿಸುತ್ತಿರುವ 770 ಕಂಬಗಳ ಮೇಲೆ ಶರಣರ ವಚನಗಳನ್ನು ಜನಸಾಮಾನ್ಯರಿಗೆ ತಿಳಿಯುವಂತೆ ಬರೆಯಬೇಕು. ಈ ಕುರಿತು ಶೀಘ್ರದಲ್ಲೇ ಹಿರಿಯ ಸಾಹಿತಿ ಗೊ.ರು. ಚನ್ನಬಸಪ್ಪ ನೇತೃತ್ವದಲ್ಲಿ ಸಭೆ ಕರೆಯಲಾಗುವುದು ಎಂದರು.

ಡಿಸಿ ಶಿಲ್ಪಾ ಶರ್ಮಾ, ಜಿಪಂ ಸಿಇಒ ಡಾ.ಗಿರೀಶ್ ಬದೋಲೆ, ಎಸ್ಪಿ ಪ್ರದೀಪ್ ಗುಂಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನೀಲಕಂಠ ರಾಠೋಡ್, ಪ್ರಮುಖರಾದ ಶಿವರಾಜ ನರಶೆಟ್ಟಿ, ಶಶಿಕಾಂತ ದುರ್ಗೆ ಇತರರಿದ್ದರು.

Share This Article
Leave a comment

Leave a Reply

Your email address will not be published. Required fields are marked *