ಬೀದರ
ಕೇತಕಿ ಶೈಕ್ಷಣಿಕ ಸಾಮಾಜಿಕ ಹಾಗೂ ಸಾಂಸ್ಕೃತಿಕ ಸಂಸ್ಥೆಯ ವತಿಯಿಂದ ಬೀದರ ಜಿಲ್ಲೆಯ ಯುವ ಪತ್ರಕರ್ತ ದೇವರಾಜ ವನಗೇರಿ ಅವರಿಗೆ ರಾಜ್ಯ ಮಟ್ಟದ ಕನ್ನಡ ಸೇವಾ ರತ್ನ ಪ್ರಶಸ್ತಿಯನ್ನ ನೀಡಿ ಸನ್ಮಾನಿಸಲಾಯಿತು.
ಬಸವಾದಿ ಶರಣರ ಆಶಯದಂತೆ ತಮ್ಮ ನೇರ ಹಾಗೂ ನಿಷ್ಠುರ ವರದಿಗಾರಿಕೆಯ ಮೂಲಕ ಶೋಷಿತ ಹಾಗೂ ತಳ ಸಮುದಾಯಗಳ ಧ್ವನಿಯಾಗಿ ಕೆಲಸ ಮಾಡುತ್ತಿರುವ ದೇವರಾಜ ಅವರಿಗೆ ಕನ್ನಡ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಹಣ್ಮು ಪಾಜಿ ತಿಳಿಸಿದರು.
ನಗರದ ಚನ್ನಬಸವ ಪಟ್ಟದೇವರ ರಂಗಮಂದಿರದಲ್ಲಿ ಹಮ್ಮಿಕೊಂಡ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಬಸವಗಿರಿಯ ಲಿಂಗಾಯತ ಮಹಾಮಠದ ಪೂಜ್ಯ ಪ್ರಭುದೇವ ಸ್ವಾಮೀಜಿ ಹಾಗೂ ಇನ್ಸೈಟ್ ಐಎಎಸ್ ಅಕಾಡೆಮಿ ಮುಖ್ಯಸ್ಥ ಜಿ.ಬಿ. ವಿನಯಕುಮಾರ ಸೇರಿ ಇನ್ನಿತರ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿದರು.
