ಪೂಜ್ಯ ಶ್ರೀ ಮಹಾಂತ ಶಿವಯೋಗಿಗಳ ಜನ್ಮದಿನ ಅಂಗವಾಗಿ ಆಗಸ್ಟ್ 1ರಂದು ವ್ಯಸನಮುಕ್ತ ದಿನ ಆಚರಿಸುತ್ತಿದ್ದು, ರಾಜ್ಯಾದ್ಯಂತ ಹಲವಾರು ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿದೆ.
ಮಂಡ್ಯ
ಬೆಳಗ್ಗೆ 10 ಗಂಟೆಗೆ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಬಳಿಕ ಎಸ್.ಬಿ ಸಮುದಾಯ ಭವನದವರೆಗೆ ಜಾಗೃತಿ ಜಾಥಾ ನಡೆಯಲಿದೆ. ವೇದಿಕೆ ಕಾರ್ಯಕ್ರಮದಲ್ಲಿ ಮನೋ ತಜ್ಞರಿಂದ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ. ಜಿಲ್ಲೆಯ ಎಲ್ಲ ಶಾಲಾ ಮತ್ತು ಕಾಲೇಜಿನಲ್ಲಿ ಪ್ರಾರ್ಥನೆಯ ನಂತರ ವಿದ್ಯಾರ್ಥಿಗಳಿಗೆ ವ್ಯಸನ ಮುಕ್ತ ದಿನಾಚರಣೆಯ ಅಂಗವಾಗಿ ಪ್ರತಿಜ್ಙಾ ವಿಧಿ ಬೋಧಿಸಲಾಗುತ್ತದೆ. ತಾಲೂಕು ಮಟ್ಟದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ವ್ಯಸನ ಮುಕ್ತ ದಿನವನ್ನು ಆಚರಿಸಲಾಗುತ್ತದೆ. ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ಸೇನನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಲು ಪ್ರೌಢಶಾಲಾ ಹಾಗೂ ಪದವಿ ಪೂರ್ವ ಹಂತದಲ್ಲಿ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆ ಆಯೋಜಿಸಿ ವಿಜೇತರಿಗೆ ಕಾರ್ಯಕ್ರಮದ ದಿನ ಬಹುಮಾನ ವಿತರಿಸಲಾಗುತ್ತದೆ.
ಚಿತ್ರದುರ್ಗ
ಬೆಳಗ್ಗೆ 9ಕ್ಕೆ ಒನಕೆ ಓಬವ್ವ ವೃತ್ತದ ಬಳಿ ಆರಂಭವಾಗುವ ಜಾಥಾದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡು, ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳೆಡೆ ಜಾಗೃತಿ ಮೂಡಿಸಲಾಗುತ್ತದೆ.
ಮದ್ಯ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ಸರ್ಕಾರಿ ಕಚೇರಿ ಅಧಿಕಾರಿ, ಸಿಬ್ಬಂದಿ ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧನೆ ಜತೆಗೆ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗುತ್ತದೆ.
ಮೈಸೂರು:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಮಧ್ಯಪಾನ ಸಂಯಮ ಮಂಡಳಿ, ಸಮಾಜ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ವಿದ್ಯಾವಿಕಾಸ ಇಂಜಿನಿಯರಿoಗ್ ಕಾಲೇಜು ಮೈಸೂರು ಇವರುಗಳ ಸಹಯೋಗದಲ್ಲಿ ಆಗಸ್ಟ್ 01 ರಂದು ಬೆಳಗ್ಗೆ 11 ಗಂಟೆಗೆ ವಿದ್ಯಾವಿಕಾಸ ಇಂಜಿನಿಯರಿoಗ್ ಕಾಲೇಜಿನಲ್ಲಿ ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆಯ ಪ್ರಯುಕ್ತ “ವ್ಯಸನ ಮುಕ್ತ ದಿನಾಚರಣೆ”ಯನ್ನು ಹಮ್ಮಿಕೊಳ್ಳಲಾಗಿದೆ.
ಕೊಪ್ಪಳ
ಬೆಳಗ್ಗೆ 10ಗಂಟೆಯಿಂದ ಜಾಥಾ ನಡೆಯಲಿದೆ. 11 ಗಂಟೆಗೆ ವೇದಿಕೆ ಕಾರ್ಯಕ್ರಮ ಇರಲಿದೆ. ಮಾದಕ ವಸ್ತು ಸೇವನೆ, ಅದರಿಂದಾಗುವ ಪರಿಣಾಮಗಳ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸ ಆಯೋಜಿಸಿ. ಮಕ್ಕಳು, ಯುವಕರಲ್ಲಿ ಜಾಗೃತಿ ಮೂಡಿಸುವ ಅಂಗವಾಗಿ ಪ್ರಬಂಧ ಏರ್ಪಡಿಸಿ. ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಸೇವನೆಯಿಂದ ದೂರ ಉಳಿವ ಬಗ್ಗೆ ಪ್ರತಿಜ್ಞಾ ವಿಧಿ ಬೋಧಿಸಿ. ಶಿಕ್ಷಣಾಧಿಕಾರಿಗಳು ಈ ಬಗ್ಗೆ ನಿರ್ದೇಶನ ನೀಡಿ. ಸಾಹಿತಿಗಳಿಂದ ವಿಶೇಷ ಲೇಖನ ಬರೆಸಿ ಜಾಗೃತಿ ಮೂಡಿಸಲಾಗುತ್ತದೆ.
ಕಲಬುರಗಿ
ಆಗಸ್ಟ್ 1 ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿ ನಗರದ ಡಾ.ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ಡಾ.ಮಹಾಂತ ಶಿವಯೋಗಿಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಮೂಲಕ ಜಿಲ್ಲಾ ಮಟ್ಟದ ವೇದಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಮತ್ತು ಕಾರ್ಯಕ್ರಮಕ್ಕೆ ಶಿಷ್ಠಾಚಾರದಂತೆ ಜಿಲ್ಲೆಯ ಎಲ್ಲಾ ಚುನಾಯಿತ ಜನಪ್ರತಿನಿಧಿಗಳನ್ನು ಆಹ್ವಾನಿಸಲು ಮತ್ತು ಮದ್ಯ ಮತ್ತು ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ತಜ್ಞರಿಂದ ಉಪನ್ಯಾಸ ಆಯೋಜಿಸಲಾಗಿದೆ.