ಗದಗ:
ನಗರದ ಜಗದ್ಗುರು ಈ ತೋಂಟದಾರ್ಯ ಮಠದ ಲಿಂಗಾಯತ ಪ್ರಗತಿಶೀಲ ಸಂಘಕ್ಕೆ ನೂತನ ಪದಾಧಿಕಾರಿಗಳನ್ನು ಶ್ರೀಮಠದಲ್ಲಿ ಜರುಗಿದ ಸಂಘದ ವಾರ್ಷಿಕ ಸಭೆಯಲ್ಲಿ ಸಂಘದ ಮಹಾಪೋಷಕ ಡಾ. ತೋಂಟದ ಸಿದ್ದರಾಮ ಸ್ವಾಮೀಜಿ ಸಮ್ಮುಖದಲ್ಲಿ ಆಯ್ಕೆ ಮಾಡಲಾಯಿತು.
ಸಮಿತಿಯ ನೂತನ ಅಧ್ಯಕ್ಷರಾಗಿ ಬಾಲಚಂದ್ರ ಭರಮಗೌಡ್ರ, ಉಪಾಧ್ಯಕ್ಷರಾಗಿ ಉಮೇಶ ಪುರದ, ವಿದ್ಯಾವತಿ ಪ್ರಭು ಗಂಜಿಯಾಳ, ಕಾರ್ಯದರ್ಶಿಯಾಗಿ ವೀರಣ್ಣ ಗೋಟಡಿಕೆ, ಸಹ ಕಾರ್ಯದರ್ಶಿಯಾಗಿ ಸೋಮನಾಥ ಪುರಾಣಿಕ, ನಾಗರಾಜ ಹಿರೇಮಠ, ಸಂಘಟನಾ ಕಾರ್ಯದರ್ಶಿಯಾಗಿ ಮಹೇಶ ಗಾಣಿಗೇರ, ಕೋಶಾಧ್ಯಕ್ಷರಾಗಿ ಬಸವರಾಜ ಕಾಡಪ್ಪನವರ, ಶಿವಾನುಭವ ಸಮಿತಿ ಚೇರ್ಮನ್ನರಾಗಿ ಈರಪ್ಪ ಬೆನಕೊಪ್ಪ, ಶಿವಾನುಭವ ಸಮಿತಿ ಸಹಚೇರಮನ್ನರಾಗಿ ಶಿವಾನಂದ ಹೊಂಬಳ ಆಯ್ಕೆಯಾಗಿದ್ದಾರೆ. ಈ ವೇಳೆ ಸಂಘದ ಹಿರಿಯ ಸದಸ್ಯರು ಉಪಸ್ಥಿತರಿದ್ದರು.