ಸಮಾಜವನ್ನು ತಿದ್ದುವಲ್ಲಿ ನಾಟಕಗಳ ಪಾತ್ರ ಮಹತ್ವದ್ದು: ಸಿದ್ಧರಾಮ ಶ್ರೀ

ಬಸವ ಮೀಡಿಯಾ
ಬಸವ ಮೀಡಿಯಾ

ಗದಗ

ನಾಟಕವೆಂದರೆ ಭಾವನೆಗಳು, ಸಂಭಾಷಣೆ ಮತ್ತು ಕ್ರಿಯೆಗಳ ಮೂಲಕ ಮಾನವ ಅನುಭವಗಳ ಚಿತ್ರಣವನ್ನು ಒಳಗೊಂಡಿರುವ ಪ್ರದರ್ಶನವೇ ನಾಟಕ. ಸಮಾಜವನ್ನು ತಿದ್ದುವಲ್ಲಿ ನಾಟಕಗಳ ಪಾತ್ರ ಮಹತ್ವದ್ದಾಗಿದೆ ಎಂದು ಡಾ. ತೋಂಟದ ಸಿದ್ದರಾಮ ಮಹಾಸ್ವಾಮಿಗಳು ಹೇಳಿದರು.

ಲಿಂಗಾಯತ ಪ್ರಗತಿಶೀಲ ಸಂಘದ ೨೭೪೬ ಶಿವಾನುಭವದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಶ್ರೀಗಳು, ಕಲಾವಿದರು ಆಯಾ ಪಾತ್ರಗಳಿಗೆ ಜೀವ ತುಂಬಿ, ಸಮಾಜಕ್ಕೆ ಸಂದೇಶ ನೀಡುವ ಕೆಲಸವನ್ನು ಮಾಡುತ್ತಾರೆ. ಉತ್ತಮ ನಟ ಪ್ರೇಕ್ಷಕರ ಹೃದಯವನ್ನು ಅಲ್ಲೋಲ ಕಲ್ಲೋಲ ಮಾಡಿದಾಗ ಉತ್ತಮ ನಟನಾಗುತ್ತಾನೆ. ಪ್ರೇಕ್ಷಕ ಒಳ್ಳೆಯದನ್ನು ಆಯ್ದುಕೊಂಡು ಕೆಟ್ಟದನ್ನು ಬಿಡಲು ಹಾಗೂ ಮನರಂಜನೆಯನ್ನು ಪಡೆಯಲು, ಸುಧಾರಣೆ ಹೊಂದಲು ನಾಟಕಗಳು ಪ್ರಯೋಜನಕಾರಿಯಾಗಿವೆ ಎಂದರು.

ಉಪನ್ಯಾಸಕರಾಗಿ ಆಗಮಿಸಿದ ಗದುಗಿನ ಡಿ.ಜಿ.ಎಂ. ಆಯುರ್ವೇದ ಮೆಡಿಕಲ್ ಕಾಲೇಜಿನ ನಿವೃತ್ತ ಪ್ರಾಚಾರ್ಯರಾದ ಡಾ. ಜಿ. ಬಿ. ಪಾಟೀಲ ಮಾತನಾಡಿ, ನಾಟಕಗಳು ಪೌರಾಣಿಕ ಕತೆ, ಕಾದಂಬರಿ ಆಧಾರಿತ, ಭಕ್ತಿ ಪ್ರಧಾನ ನಾಟಕಗಳು, ಸಮಾಜವನ್ನು ಸುಧಾರಣೆ ಮಾಡಲು ಮೂಡಿಬಂದವು. ನಾಟಕಗಳು ಸಾವಿರಾರು ವರ್ಷಗಳ ಹಿಂದಿನ ಇತಿಹಾಸವನ್ನು ಗೋಚರಿಸುತ್ತವೆ. ನಾಟಕದಲ್ಲಿ ನಟರು ಪಾತ್ರಗಳಿಗೆ ಜೀವ ತುಂಬುತ್ತಾರೆ. ಪ್ರೇಕ್ಷಕರು ಖುಷಿಪಡುತ್ತಾರೆ. ನಾಟಕಗಳು ಹೆಚ್ಚು ಹೆಚ್ಚು ಮನಸ್ಸಿನಲ್ಲಿ ಉಳಿಯುತ್ತವೆ. ನಾಟಕಗಳು ವಿವಿಧ ಪ್ರಕಾರಗಳಲ್ಲಿ ಪ್ರದರ್ಶನಗೊಳ್ಳುತ್ತವೆ ಎಂದರು.

ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸಾಣೇಹಳ್ಳಿ ವಿರಚಿತ “ಮೋಳಿಗೆ ಮಾರಯ್ಯ” ನಾಟಕವನ್ನು ತುಂಬಾ ಸುಂದರವಾಗಿ ಧಾತ್ರಿ ರಂಗ ಸಂಸ್ಥೆ ಸಿರಿಗೇರಿಯವರು ಪ್ರದರ್ಶನ ಮಾಡಿದರು.

ವಚನ ಸಂಗೀತವನ್ನು ಮೃತ್ಯುಂಜಯ ಹಿರೇಮಠ ಹಾಗೂ ಗುರುನಾಥ ಸುತಾರ ನಡೆಸಿಕೊಟ್ಟರು. ಧಾರ್ಮಿಕ ಗ್ರಂಥ ಪಠಣವನ್ನು ಕುಮಾರಿ ಐಶ್ವರ್ಯ ವಿ. ಕವಿಶೆಟ್ಟಿ ಹಾಗೂ ವಚನ ಚಿಂತನವನ್ನು ಕುಮಾರಿ ಅಮೃತಾ ವಿ. ಕವಿಶೆಟ್ಟಿ ನೆರವೇರಿಸಿದರು. ದಾಸೋಹ ಸೇವೆಯನ್ನು ಈಶಣ್ಣ ಮುನವಳ್ಳಿ ಹಾಗೂ ಸಹೋದರರು ಗದಗ ವಹಿಸಿಕೊಂಡಿದ್ದರು.

ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷರಾದ ಬಾಲಚಂದ್ರ ಭರಮಗೌಡ್ರ ಉಪಾಧ್ಯಕ್ಷರಾದ ಡಾ. ಉಮೇಶ ಪುರದ, ಕಾರ್ಯದರ್ಶಿ ವೀರಣ್ಣ ಗೋಟಡಕಿ, ಸಹಕಾರ್ಯದರ್ಶಿ ಸೋಮು ಪುರಾಣಿಕ ಹಾಗೂ ನಾಗರಾಜ ಹಿರೇಮಠ, ಸಂಘಟನಾ ಕಾರ್ಯದರ್ಶಿ ಮಹೇಶ ಗಾಣಿಗೇರ, ಕೋಶಾಧ್ಯಕ್ಷ ಬಸವರಾಜ ಕಾಡಪ್ಪನವರ, ಹಾಗೂ ಶಿವಾನುಭವ ಸಮಿತಿಯ ಸಹಚೇರ್ಮನ್ ಶಿವಾನಂದ ಹೊಂಬಳರವರು ಹಾಗೂ ಮಠದ ಭಕ್ತರು ಉಪಸ್ಥಿತರಿದ್ದರು. ಶಿವಾನುಭವ ಸಮಿತಿಯ ಚೇರ್ಮನ್ ಐ.ಬಿ.ಬೆನಕೊಪ್ಪ ಸ್ವಾಗತಿಸಿದರು. ವಿದ್ಯಾ ಪ್ರಭು ಗಂಜಿಹಾಳ ಕಾರ್ಯಕ್ರಮ ನಿರೂಪಿಸಿದರು.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/KW7PgYimGT7HL73bAEKzSR

Share This Article
Leave a comment

Leave a Reply

Your email address will not be published. Required fields are marked *