ಗೌರಿ ಹತ್ಯೆ: ಹಿಂದೂ ಸಂಘಟನೆಗಳಿಂದ ಆರೋಪಿಗಳಿಗೆ ಸನ್ಮಾನ ವಿಡಿಯೋ ವೈರಲ್

ಬಸವ ಮೀಡಿಯಾ
ಬಸವ ಮೀಡಿಯಾ

ವಿಜಯಪುರ

ಹಿಂದೂ ಸಂಘಟನೆಗಳು ಗೌರಿ ಲಂಕೇಶ್ ಹತ್ಯೆ ಆರೋಪಿಗಳಿಗೆ ಸನ್ಮಾನ ಮಾಡುವ ವಿಡಿಯೋ ಈಗ ದೇಶಾದ್ಯಂತ ವೈರಲ್ ಆಗಿದೆ. ವಿಜಯಪುರದಲ್ಲಿ ನಡೆದ ಈ ಘಟನೆಯ ವಿಡಿಯೋವನ್ನು ವಿವಿಧ ಭಾಷೆಗಳ ಮಾಧ್ಯಮಗಳು ಮತ್ತು ಆಸಕ್ತರು ಹಂಚಿಕೊಳ್ಳುತ್ತಿದ್ದಾರೆ.

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಬಂದು ತವರಿಗೆ ಆಗಮಿಸಿದ ಆರೋಪಿಗಳಿಗೆ ಸಂಘಪರಿವಾರದ ಕಾರ್ಯಕರ್ತರು ಶನಿವಾರ ಸನ್ಮಾನಿಸಿ ಅದ್ದೂರಿ ಸ್ವಾಗತ ಕೋರಿದರು.

ಇಬ್ಬರು ಆರೋಪಿಗಳು, ಪರಶುರಾಮ ವಾಗ್ಮೋರೆ ಹಾಗೂ ಮನೋಹರ್ ಯಡವೆ, ನಗರದ ಕಾಳಿಕಾ ಮಂದಿರದಲ್ಲಿ ಪೂಜೆ ಮಾಡಿ ಪ್ರಾರ್ಥಣೆ ಸಲ್ಲಿಸಿದರು. ಬಳಿಕ ಪರಶುರಾಮ ವಾಗ್ಮೋರೆ ಹಾಗೂ ಮನೋಹರ ಯಡವೆಗೆ ಶಾಲು ಹೊದಿಸಿ ಹಾರ ಹಾಕಿ ಸನ್ಮಾನಿಸಲಾಯಿತು.

ನಂತರ ಶಿವಾಜಿ ವೃತ್ತಕ್ಕೆ ತೆರಳಿ ಶಿವಾಜಿ ಮೂರ್ತಿಗೆ ಹಾರ ಹಾಕಿದರು. ಇದೇ ವೇಳೆ ಮಾತನಾಡಿದ ಶ್ರೀರಾಮ ಸೇನೆಯ ಮುಖಂಡ ನೀಲಕಂಠ ಕಂದಗಲ್ ಗೌರಿ ಲಂಕೇಶ ಹತ್ಯೆಯಲ್ಲಿ ಪರಶುರಾಮ ಹಾಗೂ ಮನೋಹರ್ ಭಾಗಿಯಾಗಿಲ್ಲ. ಹಿಂದೂ ಪರ ಹೋರಾಟಗಾರರನ್ನು ಕಾಂಗ್ರೆಸ್ ಸರ್ಕಾರ ಟಾರ್ಗೆಟ್ ಮಾಡುತ್ತಿದೆ, ಎಂದು ಹೇಳಿದರು.

Share This Article
Leave a comment

Leave a Reply

Your email address will not be published. Required fields are marked *