ಬೆಳಗಾವಿಯಲ್ಲಿ ವಿದ್ಯಾರ್ಥಿನಿಯರ ಉಚಿತ ವಸತಿ ನಿಲಯಕ್ಕೆ ಅರ್ಜಿ ಆಹ್ವಾನ

ಬಸವ ಮೀಡಿಯಾ
ಬಸವ ಮೀಡಿಯಾ

ಬೆಳಗಾವಿ

ಜಿಲ್ಲಾ ವೀರಶೈವ ಮಹಾಸಭೆಯು ಸುಭಾಷ ನಗರ, ಎಸ್.ಪಿ. ಆಫೀಸ್ ಹಿಂದುಗಡೆ ನೂತನವಾಗಿ ನಿರ್ಮಿಸಿರುವ ‘ವೀರಶೈವ ಲಿಂಗಾಯತ ಮಹಿಳಾ ವಸತಿ ಗೃಹ, ಕ್ಷೇಮಾಭಿವೃದ್ಧಿ ಸಂಘ, ಬೆಳಗಾವಿ’ ಇವರು ಬಡ ವಿದ್ಯಾರ್ಥಿನಿಯರಿಗೆ ವಸತಿ ನಿಲಯಕ್ಕೆ ಅರ್ಜಿಗಳನ್ನು ಆಹ್ವಾನಿಸಿದ್ದಾರೆ. ವೀರಶೈವ ಲಿಂಗಾಯತ ಸಮಾಜದ ಪಿಯುಸಿ, ಪದವಿ, ಇಂಜಿನಿಯರಿಂಗ್, ಎಂಬಿಬಿಎಸ್, ಡಿಪ್ಲೋಮಾ ಕೋರ್ಸುಗಳಲ್ಲಿ ಅಧ್ಯಯನ ಮಾಡುತ್ತಿರುವ ಬಡ ವಿದ್ಯಾರ್ಥಿನಿಯರು ಮಾತ್ರ ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಜಿಯನ್ನು ದಿನಾಂಕ 30.6.2025 ರೊಳಗೆ ಸಲ್ಲಿಸಬೇಕು.

ಅರ್ಜಿ ಕಳುಹಿಸುವ ವಿಳಾಸ: “ವೀರಶೈವ ಲಿಂಗಾಯತ ಮಹಿಳಾ ವಸತಿ ಗೃಹ, ಕ್ಷೇಮಾಭಿವೃದ್ಧಿ ಸಂಸ್ಥೆ, ಸಿಟಿಎಸ್ ನಂ 4818/40, ಎಸ್.ಪಿ.ರಸ್ತೆ, ಸುಭಾಷ ನಗರ, ಬೆಳಗಾವಿ, ತಾ.ಜಿ.ಬೆಳಗಾವಿ”. ಅರ್ಜಿಯೊಂದಿಗೆ ಕಾಲೇಜಿನ ಪ್ರವೇಶ ಪಡೆದ ರಶೀದಿ, ಬಿಪಿಎಲ್ ಕಾರ್ಡ್, ಆಧಾರ ಕಾರ್ಡ್, ರಹವಾಸಿಯ ದೃಢೀಕೃತ ಪ್ರಮಾಣಪತ್ರವನ್ನು ಲಗತ್ತಿಸಿರಬೇಕು.

ಹೆಚ್ಚಿನ ಮಾಹಿತಿಗೆ ಬೆಳಗಾವಿ ಜಿಲ್ಲಾ ಘಟಕ ಮಹಾಸಭೆಯ ಕಚೇರಿಯ ದೂರವಾಣಿ ಸಂಖ್ಯೆ: 0831 2475145, ಪ್ರವೀಣ ಕುಲಕರ್ಣಿ: 6366316671 ಸಂಪರ್ಕಿಸಬೇಕೆಂದು ಬೆಳಗಾವಿ ಮಹಾಸಭೆ ಜಿಲ್ಲಾ ಘಟಕದ ಅಧ್ಯಕ್ಷೆ ಶ್ರೀಮತಿ ರತ್ನಪ್ರಭಾ ಬೆಲ್ಲದ ಹಾಗೂ ವಸತಿ ನಿಲಯದ ಕಾರ್ಯದರ್ಶಿಗಳಾದ ಡಾ. ಪ್ರೀತಿ ದೊಡ್ಡವಾಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/DAHwtSaP5nUL2sT483TnP6

Share This Article
Leave a comment

Leave a Reply

Your email address will not be published. Required fields are marked *