ಬೆಂಗಳೂರು
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಸಹೋದರ ಗೋಪಾಲ್ ಜೋಶಿ, ಸಹೋದರಿ ವಿಜಯಲಕ್ಷ್ಮಿ ಮತ್ತು ಗೋಪಾಲ್ ಅವರ ಪುತ್ರ ಅಜಯ್ ವಿರುದ್ಧ 2 ಕೋಟಿ ರೂಪಾಯಿ ವಂಚನೆ ದೂರು ದಾಖಲಿಸಿದ್ದ ಮಹಿಳೆ ಸುನೀತಾ ಚವ್ಹಾಣ್ ತಾವು ದಾಖಲಿಸಿದ್ದ ಪ್ರಕರಣ ವಾಪಸ್ ಪಡೆಯಲು ನಿರ್ಧರಿಸಿದ್ದಾರೆ.
ವಂಚನೆ ಪ್ರಕರಣ ಸಂಬಂಧ ಬಸವೇಶ್ವರನಗರ ಪೊಲೀಸರು ಗುರುವಾರ ಎಫ್‌ಐಆರ್ ದಾಖಲಿಸಿದ್ದು, ದೂರುದಾರರು ರಾಜಿ ಅರ್ಜಿ ಸಲ್ಲಿಸುವ ಮೂಲಕ ದೂರನ್ನು ಹಿಂಪಡೆಯಲು ನ್ಯಾಯಾಲಯವನ್ನು ಸಂಪರ್ಕಿಸಬೇಕು. ನಾವು ಸೆಕ್ಷನ್ 164 ಸಿಆರ್‌ಪಿಸಿಯಡಿಯಲ್ಲಿ ಆಕೆಯ ಹೇಳಿಕೆಯನ್ನು ದಾಖಲಿಸಿಕೊಳ್ಳುತ್ತೇವೆ ಎಂದು ಪೊಲೀಸರು ಹೇಳಿದ್ದಾರೆ.
ಈ ಮುಂಚೆ ಜೆಡಿಎಸ್ ಮಾಜಿ ಶಾಸಕ ದೇವಾನಂದ್ ಫುಲ್ಸಿಂಗ್ ಚವ್ಹಾಣ್ ಅವರ ಪತ್ನಿ ಸುನೀತಾ ಚವ್ಹಾಣ್ (48) ” ಈ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರನ್ನು ವಿನಾಕಾರಣ ಎಳೆದು ತರಲಾಗುತ್ತಿದೆ. “ಪಾಪ ಪ್ರಲ್ಹಾದ ಜೋಶಿ ಅವರ ಪಾತ್ರ ಇದರಲ್ಲಿ ಏನೂ ಇಲ್ಲ. ಅವರು ತುಂಬಾ ಒಳ್ಳೆಯವರು. ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ” ಎಂದು ಆಕ್ಷೇಪಿಸಿದ್ದರು.