ಹತ್ತು ಚಿಂತಕರಿಗೆ ಡಾ. ಫ. ಗು. ಹಳಕಟ್ಟಿ ಪ್ರಶಸ್ತಿ ಪ್ರದಾನ

ಕಲಬುರಗಿ

ವಚನ ಸಂಶೋಧನಾ ಪಿತಾಮಹ ಡಾ. ಫ. ಗು. ಹಳಕಟ್ಟಿ ಅವರ ಪರಿಶ್ರಮದಿಂದ ಬಸವಾದಿ ಶರಣರ ವಚನ ಸಾಹಿತ್ಯ ಸಂರಕ್ಷಿಸಿದ ಪರಿಣಾಮ ಅದು ಮರು ಹುಟ್ಟು ಪಡೆದುಕೊಂಡಿತು ಎಂದು ಗುಲ್ಬರ್ಗ ವಿಶ್ವವಿದ್ಯಾಲಯದ ಕುಲಪತಿ ಡಾ. ಬಾಬಣ್ಣ ಹೂವಿನಭಾವಿ ಹೇಳಿದರು.

ನಗರದ ಕನ್ನಡ ಭವನದ ಸುವರ್ಣ ಸಭಾ ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿ ಜಂಟಿಯಾಗಿ ಭಾನುವಾರ ಆಯೋಜಿಸಿದ ೨೦೨೫ ನೇ ಸಾಲಿನ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ತಮ್ಮ ಇಡೀ ಜೀವನವೇ ವಚನಗಳ ಸಂಗ್ರಹಿಸಿ ಮುದ್ರಿಸಿ ಪ್ರಚಾರ ಮಾಡುವುದಾಗಿತ್ತು. ಹಳಕಟ್ಟಿ ಅವರು ಅಂದು ವಚನ ಸಾಹಿತ್ಯ ಸಂರಕ್ಷಿಸದಿದ್ದರೆ ಇಂದು ಓದಲು ಸಾಧ್ಯವಾಗುತ್ತಿರಲಿಲ್ಲ ಎಂದರು.

ಅಧ್ಯಕ್ಷತೆ ವಹಿಸಿದ್ದ ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ವಚನ ಸಾಹಿತ್ಯದಿಂದ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿ ಹೆಚ್ಚಿಸಿದ ಕೀರ್ತಿ ಡಾ. ಫ.ಗು. ಹಳಕಟ್ಟಿ ಅವರಿಗೆ ಸಲ್ಲುತ್ತದೆ. ಇಂಥ ಶರಣರ ಆದರ್ಶಗಳನ್ನು ನಿಜ ಜೀವನದಲ್ಲಿ ಅಳವಡಿಸಿಕೊಂಡರೆ, ನಮ್ಮ ಬದುಕು ಸಾರ್ಥಕವಾಗುತ್ತದೆ ಎಂದರು.

ಶರಣ ಚಿಂತಕಿ ಜಯಶ್ರೀ ಚಟ್ನಳ್ಳಿ ಮಾತನಾಡಿ, ಇಂದಿನ ಹೊಸ ಪೀಳಿಗೆ ಮೊಬೈಲ್ ಗಳಿಗೆ ದಾಸರಾಗದೇ ಡಾ. ಫ.ಗು. ಹಳಕಟ್ಟಿ ಅವರು ಸಂಗ್ರಹಿಸಿ ಕೊಟ್ಟ ವಚನ ಸಾಹಿತ್ಯದ ಪುಸ್ತಕಗಳನ್ನು ಅಧ್ಯಯನ ಮಾಡುವ ಮೂಲಕ ದೇಶದ ಭವಿಷ್ಯ ರೂಪಿಸುವಂತವರಾಗಬೇಕೆಂದರು.

ನಾಸಾ ಮತ್ತು ರಾಷ್ಟ್ರೀಯ ಬಾಹ್ಯಕಾಶ ಸಂಸ್ಥೆ ಇತ್ತೀಚೆಗೆ ನಡೆಸಿದ ಬಾಹ್ಯಕಾಶ ವಸಾಹತು ಸ್ಪರ್ಧೆಯಲ್ಲಿ ಭಾಗವಹಿಸಿ ಐತಿಹಾಸಿಕ ಗೆಲುವು ಸಾಧಿಸಿ ವಿಶ್ವದಲ್ಲಿಯೇ ಪ್ರಥಮ ಸ್ಥಾನ ಪಡೆದ ಹನ್ನೊಂದು ವಿದ್ಯಾರ್ಥಿಗಳನ್ನು ವಿಶೇಷವಾಗಿ ಸತ್ಕರಿಸಿ ಪ್ರೋತ್ಸಾಹಿಸಲಾಯಿತು.

ಪ್ರಶಸ್ತಿ ಪುರಸ್ಕೃತರು:
ಶರಣ ಸಾಹಿತ್ಯ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡಿದ ಶರಣಾನುಯಾಯಿಗಳಾದ ವಿಶ್ವನಾಥ ಮಂಗಲಗಿ, ಅಮೃತರಾವ ಪಾಟೀಲ ಅಫಜಲಪೂರ, ಮರಿಯಪ್ಪ ಹಳ್ಳಿ ಶಹಾಬಾದ, ಡಾ. ಶಿವಲೀಲಾ ಚಟ್ನಳ್ಳಿ, ಲಕ್ಷ್ಮೀಕಾಂತ ಹುಬಳಿ, ಶಿವಲಿಂಗಪ್ಪ ಅಷ್ಟಗಿ, ಡಾ. ಗೌಸುದ್ದೀನ್ ತುಮಕೂರಕರ, ನಾಗೇಂದ್ರಪ್ಪ ನಿಂಬರ್ಗಿ, ಸಿದ್ಧರಾಮ ಯಳವಂತಗಿ, ಕಾವೇರಿ ಎನ್ ಪಾಟೀಲ ಅವರನ್ನು ೨೦೨೫ ನೇ ಸಾಲಿನ ಡಾ. ಫ. ಗು. ಹಳಕಟ್ಟಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಯಾದಗಿರಿ ವೈದ್ಯಕೀಯ ವಿಜ್ಷಾನಗಳ ಸಂಸ್ಥೆಯ ನಿರ್ದೇಶಕ ಡಾ. ಸಂದೀಪ ಹರಷಿಣಿಗಿ, ಹೂಗಾರ ಸಮಾಜದ ಮುಖಂಡ ಸೂರ್ಯಕಾಂತ ಫುಲಾರಿ, ರಾಜೀವಗಾಂಧಿ ವಿಶ್ವವಿದ್ಯಾಲಯದ ಸೆನೆಟ್ ಸದಸ್ಯ ಡಾ. ಅರವಿಂದ ಕಟ್ಟಿ ಮಾತನಾಡಿದರು. ಜಿಲ್ಲಾ ಕಸಾಪ ದ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಧರ್ಮಣ್ಣ ಎಚ್ ಧನ್ನಿ, ಕೋಶಾಧ್ಯಕ್ಷ ಶರಣರಾಜ ಛಪ್ಪರಬಂದಿ, ಅಕಾಡೆಮಿ ಅಧ್ಯಕ್ಷ ಬಿ.ಎಂ. ಪಾಟೀಲ ಕಲ್ಲೂರ, ಸಿದ್ಧಲಿಂಗ ಜಿ. ಬಾಳಿ, ಪ್ರಮುಖರಾದ ರವೀಂದ್ರಕುಮಾರ ಭಂಟನಳ್ಳಿ, ರಾಜೇಂದ್ರ ಮಾಡಬೂಳ, ಧರ್ಮರಾಜ ಜವಳಿ, ನಾಗಪ್ಪ ಸಜ್ಜನ, ಶರಣಬಸಪ್ಪ ಕೋಬಾಳ, ಪ್ರಭುಲಿಂಗ ಮೂಲಗೆ, ರವಿಕುಮಾರ ಶಹಾಪುರಕರ, ಪ್ರಭವ ಪಟ್ಟಣಕರ, ಶಕುಂತಲಾ ಪಾಟೀಲ, ಜ್ಯೋತಿ ಕೋಟನೂರ, ಭುವನೇಶ್ವರಿ ಹಳ್ಳಿಖೇಡ, ಆರ್.ಸಿ. ಘಾಳೆ, ರಾಜಶೇಖರ ಪಾಟೀಲ ತೇಗಲತಿಪ್ಪಿ, ದಿನೇಶ ಮದಕರಿ, ರಮೇಶ ಬಡಿಗೇರ, ಶಿವಾನಂದ ಪೂಜಾರಿ, ಮಾಲಾ ದಣ್ಣೂರ, ದಾಸಿಮಯ್ಯ ವಡ್ಡನಕೇರಿ, ಸದಾಶಿವ ಮೇತರೆ, ಜಗದೇವಪ್ಪ ಅಂಜುಟಗಿ. ಅಮೃತಪ್ಪ ಅಣೂರ ಕವಿ, ಜಗನ್ನಾಥ ರಾಚೋಟಿ, ವೆಂಕಟೇಶ ಜನಾದ್ರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/JREWkVu0WPE5tE1y0tzNQ1

Share This Article
Leave a comment

Leave a Reply

Your email address will not be published. Required fields are marked *