ಬೆಂಗಳೂರು
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಶಿವಶರಣೆ, ಮಹಾಸಾಧ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತಿಯ ರಾಜ್ಯಮಟ್ಟದ ಕಾರ್ಯಕ್ರಮವನ್ನು ಶನಿವಾರ ಆಯೋಜಿಸಲಾಗಿತ್ತು.
ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಎರೆಹೊಸಹಳ್ಳಿ ಗ್ರಾಮದ ರೆಡ್ಡಿ ಗುರುಪೀಠದ ಪೀಠಾಧಿಪತಿಗಳಾದ ಶ್ರೀ ವೇಮನಾನಂದ ಮಹಾಸ್ವಾಮಿಗಳು ಕಾರ್ಯಕ್ರಮ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಶ್ರೀಮತಿ ಕೆ.ಎಂ. ಗಾಯಿತ್ರಿ, ಕರ್ನಾಟಕ ರೆಡ್ಡಿ ಜನಸಂಘದ ಅಧ್ಯಕ್ಷರಾದ ಶ್ರೀ ಎಸ್. ಜಯರಾಮರೆಡ್ಡಿಯವರು, ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಎಸ್. ಶೇಖರ್ ರೆಡ್ಡಿಯವರು, ಉಪನ್ಯಾಸಕರಾದ ತುಮಕೂರು ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜಿನ ಕನ್ನಡ ಸಹ ಪ್ರಾಧ್ಯಾಪಕರಾದ ಡಾ. ವೆಂಕಟರೆಡ್ಡಿ ರಾಮರೆಡ್ಡಿಯವರು, ಸಮುದಾಯದ ಮುಖಂಡರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿ-ಸಿಬ್ಬಂದಿ ವರ್ಗ, ಮಾಧ್ಯಮ ಮಿತ್ರರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.
ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/FYCnBXoFfiK0GH4dAJvoia/