ಗದಗ:
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರು ವಿಧಾನ ಪರಿಷತ್ ಪ್ರವೇಶಿಸಿ 45 ವರ್ಷ ಪೂರೈಸಿದ ಪ್ರಯುಕ್ತ, ಅವರ ಬದುಕು, ಸಂಘಟನೆ, ಹೋರಾಟ ಕುರಿತು ಜ. ತೋಂಟದಾರ್ಯ ವಿದ್ಯಾಪೀಠದ ಕಾರ್ಯದರ್ಶಿ ಪ್ರೊ. ಶಿವಾನಂದ ಪಟ್ಟಣಶೆಟ್ಟಿ ಅವರಿಂದ ಜ. ತೋಂಟದಾರ್ಯ ಮಠದಲ್ಲಿ ಶಿವಾನುಭವ ಕಾರ್ಯಕ್ರಮದಲ್ಲಿ ಉಪನ್ಯಾಸ ನಡೆಯಲಿದೆ.
ಲಿಂಗಾಯತ ಪ್ರಗತಿಶೀಲ ಸಂಘದ 2753ನೇ ಶಿವಾನುಭವ ಜುಲೈ 7, 2025ರ ಸೋಮವಾರ ಸಂಜೆ 07.30 ಗಂಟೆಗೆ ನಡೆಯಲಿದ್ದು, ಪೂಜ್ಯ ಡಾ. ತೋಂಟದ ಸಿದ್ದರಾಮ ಮಹಾಸ್ವಾಮಿಗಳು ಸಾನಿಧ್ಯ ವಹಿಸುವರು.
ಇದೇ ಸಂದರ್ಭದಲ್ಲಿ ಮುಳಗುಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯ ಡಾ. ರಮೇಶ ಕಲ್ಲನಗೌಡ್ರ ಇವರಿಂದ, ವಚನ ಸಾಹಿತ್ಯ ಪಿತಾಮಹ ಡಾ. ಫ.ಗು. ಹಳಕಟ್ಟಿ ಹಾಗೂ ಪ್ರವಚನ ಪಿತಾಮಹ ಪೂಜ್ಯ ಲಿಂಗಾನಂದ ಮಹಾಸ್ವಾಮಿಗಳ ಕುರಿತು ಉಪನ್ಯಾಸ ಸಹ ನಡೆಯಲಿದೆ.
ವಿಪ ಸಭಾಪತಿ ಬಸವರಾಜ ಹೊರಟ್ಟಿ ಅವರ ಘನ ಉಪಸ್ಥಿತಿಯಿದ್ದು, ಗದಗ ಅವ್ವ ಸೇವಾ ಟ್ರಸ್ಟ್ ಸಂಚಾಲಕ ಡಾ. ಬಸವರಾಜ ಧಾರವಾಡ ಮುಖ್ಯ ಅತಿಥಿಯಾಗಿರಲಿದ್ದಾರೆ.
