ಹುಬ್ಬಳ್ಳಿ
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ನೂರಾರು ಪೌರಕಾರ್ಮಿಕರ ೨೮ ದಿನಗಳ ಹೋರಾಟಕ್ಕೆ ಜಯ ಸಿಕ್ಕಿದೆ.
ಆಗಸ್ಟ್ ೭, ೨೦೧೭ರಂದು ಪೌರಕಾರ್ಮಿಕರಿಗೆ ನೇರ ನೇಮಕಾತಿ ಮತ್ತು ನೇರ ವೇತನ ಪಾವತಿಸುವಂತೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿತ್ತು. ಉಳಿದ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ಈ ಆದೇಶ ಜಾರಿಗೊಂಡಿದ್ದರೂ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಪೌರಕಾರ್ಮಿಕರು ಹಹಲವಾರು ಕಾರಣಗಳಿಂದ ಈ ಹಕ್ಕುಗಳಿಂದ ವಂಚಿತರಾಗಿದ್ದರು.

ಡಿಸೆಂಬರ್ ತಿಂಗಳಲ್ಲಿ ಶುರುವಾದ ಅವರ ಹೋರಾಟಕ್ಕೆ ಜನವರಿ ೭ ರಂದು ಪ್ರತಿಫಲ ದೊರಕಿತು. ಮಹಾನಗರ ಪಾಲಿಕೆಯ ಮಹಾಪೌರರು ಮತ್ತು ಆಯುಕ್ತರು ಪೌರಕಾರ್ಮಿಕರಿಗೆ ನೇರ ನೇಮಕಾತಿ ಪತ್ರಗಳನ್ನು ನೀಡಿದರು ಮತ್ತು ಇನ್ನು ಹಲವು ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡರು.
ಈ ಹೋರಾಟದಲ್ಲಿ ಹಲವು ಕಾನೂನು ವಿದ್ಯಾರ್ಥಿಗಳು ಕೂಡ ಬಾಗವಹಿಸಿದ್ದರು. ಡಾ ಬಿ ಆರ್ ಅಂಬೇಡ್ಕರವರ ಶಿಕ್ಷಣ ಸಂಘಟನೆ ಹೋರಾಟದ ಹಾದಿಯಲ್ಲಿ ಸಾಗಿದ್ದೇವೆ ಎಂದು ಅವರು ಹೇಳಿದ್ದಾರೆ.
