ಇಳಕಲ್:
ಭಾಲ್ಕಿ ಪಟ್ಟಣದ ಹಿರೇಮಠ ಸಂಸ್ಥಾನದ ಸಾಹಿತಿ ರಾಜು ಜುಬರೆ ಅವರಿಗೆ ಬಸವಗುರು ಕಾರುಣ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಬಾಗಲಕೋಟೆ ಜಿಲ್ಲೆ ಇಳಕಲ್ಲ ಚಿತ್ತರಗಿ ವಿಜಯ ಮಹಾಂತೇಶ ಸಂಸ್ಥಾನ ಮಠದಲ್ಲಿ ಶುಕ್ರವಾರ ನಡೆದ ಶರಣ ಸಂಸ್ಕೃತಿ ಮಹೋತ್ಸವ- 2024 ಮತ್ತು ಬಸವಧರ್ಮ ಪ್ರವಚನ ಕಾರ್ಯಕ್ರಮದಲ್ಲಿ ಚಿತ್ತರಗಿ ವಿಜಯ ಮಹಾಂತೇಶ ಸಂಸ್ಥಾನ ಮಠದ ವತಿಯಿಂದ ಕೊಡಮಾಡುವ 2024ನೇ ಸಾಲಿನ ಬಸವಗುರು ಕಾರುಣ್ಯ ಪ್ರಶಸ್ತಿಯನ್ನು ಸಾಹಿತಿ ರಾಜು ಜುಬರೆ ಅವರಿಗೆ ಪ್ರದಾನ ಮಾಡಲಾಯಿತು.
ಬೀದರ್ ಸಂಸದ ಸಾಗರ ಖಂಡ್ರೆ ಅವರು ಪ್ರಶಸ್ತಿ ನೀಡಿದರು. ಈ ಸಂದರ್ಭದಲ್ಲಿ ಚಿತ್ತರಗಿ ಮಠದ ಗುರುಮಹಾಂತ ಸ್ವಾಮೀಜಿ, ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು, ಶಿರೂರು ಮಹಾಂತ ತೀರ್ಥದ ಬಸವಲಿಂಗಸ್ವಾಮೀಜಿ, ಜನವಾಡ ಶ್ರೀಗಳು, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ, ಕಲಾವಿದ ನವಲಿಂಗ ಪಾಟೀಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದೇ ವೇಳೆ ಭಾಲ್ಕಿ ಹಿರೇಮಠ ಸಂಸ್ಥಾನ ವತಿಯಿಂದ ಪ್ರಕಟಿತ ಸಾಹಿತಿ ರಾಜು ಜುಬರೆ ಅನುವಾದಿಸಿದ ಡಾ. ಮಹಾಂತ ಶಿವಯೋಗಿ ಗ್ರಂಥವನ್ನು ಗುರುಮಹಾಂತ ಸ್ವಾಮೀಜಿ ಬಿಡುಗಡೆ ಮಾಡಿದರು.
ಶರಣ ಸಂಸ್ಕೃತಿ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬೀದರ ಸಂಸದ ಸಾಗರ ಖಂಡ್ರೆ ಮತ್ತು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೇಯವರನ್ನು ಚಿತ್ತರಗಿ ವಿಜಯ ಮಹಾಂತ ಮಠದ ವತಿಯಿಂದ ಮಠದ ಪೀಠಾಧಿಪತಿ ಗುರು ಮಹಾಂತ ಸ್ವಾಮೀಜಿ ಸನ್ಮಾನಿಸಿ ಗೌರವಿಸಿದರು.